ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ಪ್ರಧಾನಿ ಮೋದಿ-ಮಮತಾ ಬ್ಯಾನರ್ಜಿ ಭೇಟಿ ಸಾಧ್ಯತೆ

Published 1 ಮಾರ್ಚ್ 2024, 11:32 IST
Last Updated 1 ಮಾರ್ಚ್ 2024, 11:32 IST
ಅಕ್ಷರ ಗಾತ್ರ

ಕೋಲ್ಕತ್ತ: ಎರಡು ದಿನ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು (ಶುಕ್ರವಾರ) ರಾತ್ರಿ ಭೇಟಿ ಮಾಡುವ ಸಾಧ್ಯತೆಯಿದೆ.

ರಾತ್ರಿ ರಾಜಭನವನದಲ್ಲಿ ಮಮತಾ ಬ್ಯಾನರ್ಜಿ ಅವರು ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಹೂಗ್ಲಿ ಮತ್ತು ನಾಡಿಯಾ ಜಿಲ್ಲೆಗಳಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಹಲವು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

ಮಮತಾ ಬ್ಯಾನರ್ಜಿ ಅವರು ಸಂಜೆ ಅಥವಾ ರಾತ್ರಿ ಪ್ರಧಾನಿಯನ್ನು ಭೇಟಿ ಮಾಡಲು ರಾಜಭವನಕ್ಕೆ ಬರುವ ಸಾಧ್ಯತೆಯಿದೆ. ಈ ಸಭೆಯು ಶಿಷ್ಟಾಚಾರದ ಪ್ರಕಾರವಾಗಿದೆ. ಆದರೆ ಭೇಟಿಯ ಸಮಯ ಇನ್ನೂ ತಿಳಿದಿಲ್ಲ "ಎಂದು ರಾಜಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್ನಲ್ಲಿ, ಬ್ಯಾನರ್ಜಿ ಅವರು ನವದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಬಾಕಿ ಬಿಡುಗಡೆಗಾಗಿ ಒತ್ತಾಯಿಸಿದ್ದರು.

ಟಿಎಂಸಿ ಪ್ರಕಾರ, ಕೇಂದ್ರವು ಪಶ್ಚಿಮ ಬಂಗಾಳಕ್ಕೆ ₹ 1.18 ಲಕ್ಷ ಕೋಟಿ ಬಾಕಿ ಇರಿಸಿಕೊಂಡಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT