ಕೋಲ್ಕತ್ತ: ವಿದ್ಯಾರ್ಥಿ ಕ್ರೆಡಿಟ್ ಕಾರ್ಡ್ ಯೋಜನೆಗಾಗಿ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಈವರೆಗೆ 26 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಈ ಯೋಜನೆಯಡಿ ಉನ್ನತ ವ್ಯಾಸಂಗಕ್ಕಾಗಿ ₹10 ಲಕ್ಷದವರೆಗೆ ಸಾಲ ವಿತರಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ನೆರವಾಗಲು ಈ ಯೋಜನೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜೂನ್ 30ರಂದು ಪ್ರಾರಂಭಿಸಿದ್ದು, ಇದರ ಅಡಿಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಮುಂದಿನ ವ್ಯಾಸಂಗಕ್ಕಾಗಿ ₹10 ಲಕ್ಷದವರಗೆ ಸಾಲ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

ಇದುವರೆಗೆ 26 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಅವುಗಳಲ್ಲಿ 16,800 ಗಂಡು ಮಕ್ಕಳು ಮತ್ತು 9,700 ಹೆಣ್ಣು ಮಕ್ಕಳು ಅರ್ಜಿ ಸಲ್ಲಿಸಿದ್ದಾರೆ. ಆ ಪೈಕಿ 6,059 ಮಂದಿ ಪಶ್ಚಿಮ ಬಂಗಾಳ ಮೂಲದವರಾಗಿದ್ದು, ಅವರು ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

‘ಈ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಯೋಜನವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಅರ್ಜಿಗಳನ್ನು ಸ್ವೀಕರಿಸಲು ನಾವು ಸಿದ್ಧರಿದ್ದೇವೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಎಂಬಿಬಿಎಸ್, ಬಿ.ಟೆಕ್, ಡಿಪ್ಲೊಮಾಕೋರ್ಸ್‌ಗಳಂತಹ ವೃತ್ತಿಪರ ಕೋರ್ಸ್‌ಗಳ ವ್ಯಾಸಂಗಕ್ಕಾಗಿ ಸಾಲ ಪಡೆಯಲು ಅರ್ಜಿ ಸಲ್ಲಿಸಬಹುದು. ಸಾಲದ ಮೊತ್ತಕ್ಕೆ ಶೇಕಡಾ 4ರಷ್ಟು ಬಡ್ಡಿದರ ವಿಧಿಸಲಾಗುತ್ತದೆ. ಅಧ್ಯಯನದ ಅವಧಿಯಲ್ಲಿ ಸಾಲ ಮರುಪಾವತಿ ಮಾಡಿದರೆ ಬಡ್ಡಿದರ ಮತ್ತಷ್ಟು ಕಡಿಮೆ ಮಾಡಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉನ್ನತ ವ್ಯಾಸಂಗ ಮಾಡುವುದರ ಜತೆಗೆ, ವಿದ್ಯಾರ್ಥಿಗಳು ಲ್ಯಾಪ್‌ಟಾಪ್, ಪುಸ್ತಕಗಳನ್ನು ಖರೀದಿಸಲು ಅಥವಾ ಬೋಧನಾ ಶುಲ್ಕ ಮತ್ತು ಬೋರ್ಡಿಂಗ್ ಶುಲ್ಕವನ್ನು ಪಾವತಿಸಲು ಸಹ ಸಾಲಕ್ಕಾಗಿ ಅರ್ಜಿ ಸಲ್ಲಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.