ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂದೇಶ್‌ಖಾಲಿ:ಮನೆಗೆ ನುಗ್ಗಿ ಬಾಲಕಿಗೆ ಲೈಂಗಿಕ ಕಿರುಕುಳ;TMC ಕಾರ್ಯಕರ್ತನ ವಿಚಾರಣೆ

Published 19 ಮೇ 2024, 5:08 IST
Last Updated 19 ಮೇ 2024, 5:08 IST
ಅಕ್ಷರ ಗಾತ್ರ

ಕೋಲ್ಕತ್ತ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಟಿಎಂಸಿ ಕಾರ್ಯಕರ್ತನನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಶುಕ್ರವಾರ ರಾತ್ರಿ ಮನೆಗೆ ನುಗ್ಗಿರುವ ಆರೋಪಿಯು ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಬಾಲಕಿಯ ತಾಯಿ ದೂರು ನೀಡಿದ್ದಾರೆ.

8ನೇ ತರಗತಿಯ ಬಾಲಕಿ ಕೂಗಿಕೊಂಡಿದ್ದರಿಂದ ಕುಟುಂಬ ಸದಸ್ಯರು ಮತ್ತು ನೆರೆಮನೆಯ ಜನರು ನೆರವಿಗೆ ಧಾವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನಿಗೆ ಸುಮಾರು 20 ವರ್ಷ ವಯಸ್ಸಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಬಸಿರ್‌ಹಾತ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಬಾಲಕಿಗೆ ವೈದ್ಯಕೀಯ ಚಿಕಿತ್ಸೆ ನಡೆಸಲಾಗಿದ್ದು, ವರದಿಗಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ.

ಟಿಎಂಸಿ ನಾಯಕ ಶಹಜಹಾನ್ ಶೇಖ್ ಮತ್ತು ಅವರ ಬೆಂಬಲಿಗರಿಂದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಭೂಮಿ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಫೆಬ್ರುವರಿಯಿಂದ ಸಂದೇಶ್‌ಖಾಲಿಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇತ್ತೀಚೆಗೆ, ಶಹಜಹಾನ್ ಅವರನ್ನು ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT