ಜಲಪೈಗುರಿ: ಪಶ್ಚಿಮ ಬಂಗಾಳದ ಜಲಪೈಗುರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾನುವಾರ ಬಿರುಗಾಳಿಯೊಂದಿಗೆ ಭಾರಿ ಮಳೆ ಸುರಿದಿದೆ. ಮಳೆ ಸಂಬಂಧಿತ ಅವಘಡದಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ಜಲಪೈಗುರಿ ಜಿಲ್ಲೆಯ ರಾಜರ್ಹಾಟ್, ಬರ್ನಿಷ್, ಬಾಕಲಿ, ಜೋರ್ಪಕಡಿ, ಮಾಧಬ್ಡಾಂಗಾ, ಸಪ್ತಿಬಾರಿ ಪ್ರದೇಶಗಳಲ್ಲಿ ಹೆಚ್ಚು ಹಾನಿಯಾಗಿದೆ. ಅಲ್ಲದೇ ಮಳೆ ಸಂಬಂಧಿತ ಅವಘಡಗಳಲ್ಲಿ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಭಾನುವಾರ ತಡರಾತ್ರಿ ಜಲಪೈಗುರಿ ಜಿಲ್ಲೆಗೆ ದೌಡಾಯಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರದಿಂದ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
.ಮಳೆ, ಬಿರುಗಾಳಿ: ಪಶ್ಷಿಮ ಬಂಗಾಳದಲ್ಲಿ 4 ಸಾವು, ವಿಮಾನಗಳ ಮಾರ್ಗ ಬದಲು.
'ಅವಘಡದಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡವರ ಸಂಖ್ಯೆಯೂ ಹೆಚ್ಚಾಗಿದೆ. ಮೃತರ ಕುಟುಂಬ ಸದಸ್ಯರನ್ನು ಮತ್ತು ಗಾಯಾಳುಗಳನ್ನು ಭೇಟಿ ಮಾಡಿದ್ದೇನೆ. ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲಾಗುವುದು' ಎಂದು ಅವರು ಹೇಳಿದ್ದಾರೆ.

ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಪ್ರತಿಕ್ರಿಯಿಸಿದ ಸಿಎಂ, ‘ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಬಗ್ಗೆ ಏನನ್ನೂ ಹೇಳಲಾಗುವುದಿಲ್ಲ' ಎಂದಿದ್ದಾರೆ.
.ಮಳೆ, ಬಿರುಗಾಳಿ | ಪಶ್ಚಿಮ ಬಂಗಾಳದಲ್ಲಿ ನಾಲ್ವರ ಸಾವು: ಪ್ರಧಾನಿ ಮೋದಿ ಸಂತಾಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.