ನವದೆಹಲಿ: ಸುಪ್ರೀಂ ಕೋರ್ಟ್ ನಿರ್ದೇಶನಕ್ಕೆ ಬದ್ಧವಾಗಿರುವ ಪಶ್ಚಿಮ ಬಂಗಾಳ ಸರ್ಕಾರ 35,726 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

ಹಿಂದಿನ ನೇಮಕಾತಿಯನ್ನು ಅಸಿಂಧುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಮೇ ತಿಂಗಳ ಅಂತ್ಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಸೂಚನೆ ನೀಡಿತ್ತು.

ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ 25,753 ಶಿಕ್ಷಕರು ಹಾಗೂ ಇತರ ಸಿಬ್ಬಂದಿಯನ್ನು ಪಶ್ಚಿಮ ಬಂಗಾಳ ಸರ್ಕಾರ ಈ ಹಿಂದೆ ನೇಮಕಾತಿ ಮಾಡಿಕೊಂಡಿತ್ತು. ಇದರಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಹಲವರು ಕೋರ್ಟ್ ಮೊರೆ ಹೋಗಿದ್ದರು.

ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು ಹೊಸ ಅಧಿಸೂಚನೆ ಹೊರಡಿಸುವಂತೆ ಕಲ್ಕತ್ತ ಹೈಕೋರ್ಟ್ ಬಂಗಾಳ ಸರ್ಕಾರಕ್ಕೆ ಸೂಚನೆ ನೀಡಿತ್ತು. ಇದನ್ನು ಪ್ರಶ್ನಿಸಿ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.

2024ರ ಏಪ್ರಿಲ್ 22ರಂದು ಕಲ್ಕತ್ತ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿಯಿತು. ಅಲ್ಲದೇ, ಹೊಸದಾಗಿ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಹಾಗೂ ಈ ಪ್ರಕ್ರಿಯೆಯನ್ನು ಮೂರು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಟಿಎಂಸಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು.

ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಹೊಸ ಅಧಿಸೂಚನೆ ಹೊರಡಿಸಿದೆ.

ಸರ್ಕಾರ ಹೊಡಿಸಿರುವ ಅಧಿಸೂಚನೆಯ ಪ್ರಕಾರ, 9-10ನೇ ತರಗತಿಗಳಿಗೆ 23,312 ಶಿಕ್ಷಕರು ಮತ್ತು 11-12ನೇ ತರಗತಿಗಳಿಗೆ 12,514 ಶಿಕ್ಷಕರ ನೇಮಕಾತಿಗೆ ಅರ್ಜಿ ಕರೆಯಲಾಗಿದೆ.

ವಯಸ್ಸಿನ ಮಿತಿಯನ್ನು 21 ವರ್ಷದಿಂದ 40 ವರ್ಷಗಳವರೆಗೆ ನಿಗದಿಪಡಿಸಿದೆ. ಆದಾಗ್ಯೂ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳು, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು ಅಂಗವಿಕಲರಿಗೆ 8 ವರ್ಷಗಳವರೆಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇರುತ್ತದೆ ಎಂದು ಅಧಿಸೂಚನೆ ತಿಳಿಸಿದೆ.

ಅಭ್ಯರ್ಥಿಗಳಿಗೆ OMR ಹಾಳೆಗಳ ಕಾರ್ಬನ್ ಪ್ರತಿಗಳನ್ನು ನೀಡಲಾಗುವುದು, ಅದನ್ನು ಮೂರು ವರ್ಷಗಳ ಕಾಲ ಸಂರಕ್ಷಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಜುಲೈ 17 ಕೊನೆಯ ದಿನವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.