ಕೋಲ್ಕತ್ತ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತೃಣಮೂಲ ಕಾಂಗ್ರೆಸ್ ಸಂಸದ ನೂರುಲ್ ಇಸ್ಲಾಂ ಅವರು ಬುಧವಾರ ನಿಧನರಾದರು.
ಅವರಿಗೆ 61 ವರ್ಷ ವಯಸ್ಸಾಗಿತ್ತು. ಉತ್ತರ ಪರಗಣಾ ಜಿಲ್ಲೆಯ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನೂರುಲ್ ಇಸ್ಲಾಂ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಸುಂದರ್‌ಬನ್ ಪ್ರದೇಶದಲ್ಲಿ ಬಡವರ ಕಲ್ಯಾಣಕ್ಕಾಗಿ ಅವರ ಮಾಡಿದ ಕೆಲಸಗಳು ಸ್ಮರಣೀಯವಾದವು ಎಂದು ಹೇಳಿದ್ದಾರೆ.
ನೂರುಲ್ ಇಸ್ಲಾಂ ಅವರು 2009 ಹಾಗೂ 2023ರಲ್ಲಿ ಸಂಸದರಾಗಿ ಆಯ್ಕೆಯಾಗಿದ್ದರು, 2016ರಲ್ಲಿ ವಿಧಾನಸಭಾ ಸದಸ್ಯರಾಗಿಯೂ ಆಯ್ಕೆಯಾಗಿದ್ದರು.