ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ನಲ್ಲಿ ನಡೆದ ಹಿಂಸಾಚಾರದ ವೇಳೆ ಮೃತಪಟ್ಟ ಕುಟುಂಬದ ಸದಸ್ಯರನ್ನು ರಾಜ್ಯಪಾಲ ಸಿ.ವಿ. ಆನಂದ ಬೋಸ್ ಶನಿವಾರ ಭೇಟಿ ಮಾಡಿ, ಸಾಂತ್ವನ ಹೇಳಿದ್ದಾರೆ.

ಮೃತರ ಕುಟುಂಬದ ಸದಸ್ಯರೊಂದಿಗೆ ಬೋಸ್ ಮಾತನಾಡಿ, ಧೈರ್ಯ ತುಂಬಿದರು. ಕೊಲೆ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ರಾಜಭವನದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಹಿಂಸಾಚಾರದ ವೇಳೆ ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದರು. ಜಾಫ್ರಾಬಾದ್ ಪ್ರದೇಶದ ಮನೆಯೊಂದರಲ್ಲಿ ಚಾಕು ಇರಿತದ ಗಾಯಗಳೊಂದಿಗೆ ಹರೋಗೋಬಿಂದೋ ದಾಸ್ ಮತ್ತು ಚಂದನ್ ದಾಸ್ ಶವಗಳು ಪತ್ತೆಯಾಗಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದರು.
.Video: ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗಾಗಿ ಚಾಲಕಿಯಾದ ಶಿಕ್ಷಕಿ ಜಲಜಾಕ್ಷಿ!.ಮೋದಿ ಜೊತೆ ಮಾತನಾಡಿದ್ದು ಗೌರವವೇ ಸರಿ, ವರ್ಷಾಂತ್ಯದಲ್ಲಿ ಭಾರತಕ್ಕೆ ಬರುವೆ: ಮಸ್ಕ್.
ಜಿಲ್ಲೆಯ ಧುಲಿಯನ್, ಸುಟಿ ಮತ್ತು ಜಂಗಿಪುರದ ಹಿಂಸಾಚಾರ ಪೀಡಿತ ಸ್ಥಳಗಳಿಗೂ ಬೋಸ್ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಕ್ಫ್ (ತಿದ್ದುಪಡಿ) ಮಸೂದೆಯನ್ನು ವಿರೋಧಿಸಿ ಮುರ್ಶಿದಾಬಾದ್ನ ಕೆಲವು ಪ್ರದೇಶಗಳಲ್ಲಿ ನಡೆಸಲಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಧುಲಿಯನ್ನ ಮಂದಿರಪಾರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಮತ್ತು ನೂರಾರು ಮಹಿಳೆಯರು ರಕ್ಷಣೆಗಾಗಿ ತಮ್ಮ ಮನೆಗಳನ್ನು ತೊರೆದು ಓಡಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರವಾಸವನ್ನು ಮುಂದೂಡುವಂತೆ ರಾಜ್ಯ ಪಾಲರಿಗೆ ಮನವಿ ಮಾಡಿದ್ದರು. ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರೆ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನವಾಗಬಹುದು ಎಂದು ತಿಳಿಸಿದ್ದರು. ಆದರೆ ಬ್ಯಾನರ್ಜಿ ಅವರ ಮನವಿಯನ್ನು ಧಿಕ್ಕರಿಸಿ ಭೇಟಿ ನೀಡಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.

ಮುಸ್ಲಿಂ ಬಾಹುಳ್ಯವಿರುವ ಮುರ್ಶಿದಾಬಾದ್ನಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಏಪ್ರಿಲ್ 8ರಿಂದ 12ರವರೆಗೆ ನಡೆದ ಹಿಂಸಾಚಾರದಲ್ಲಿ ತಂದೆ–ಮಗ ಸೇರಿ ಮೂವರು ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 274 ಮಂದಿಯನ್ನು ಬಂಧಿಸಲಾಗಿದೆ.
.ಕೆನಡಾದ ಒಂಟಾರಿಯೊದಲ್ಲಿ ಗುಂಡಿನ ದಾಳಿ: ಭಾರತೀಯ ವಿದ್ಯಾರ್ಥಿನಿ ಸಾವು .Naveen Patnaik | ಒಡಿಶಾ: ಸತತ 9ನೇ ಬಾರಿಗೆ ನವೀನ್ ಪಟ್ನಾಯಕ್ ಬಿಜೆಡಿ ಅಧ್ಯಕ್ಷ.ಕೇರಳ | ಹೋಟೆಲ್ ದಾಳಿ ವೇಳೆ ಪರಾರಿ ಪ್ರಕರಣ; ವಿಚಾರಣೆಗೆ ನಟ ಶೈನ್ ಹಾಜರು.ನೇಪಾಳ: ಬಸ್ ಅಪಘಾತದಲ್ಲಿ 25 ಭಾರತೀಯ ಪ್ರವಾಸಿಗರಿಗೆ ಗಾಯ, ಮೂವರ ಸ್ಥಿತಿ ಗಂಭೀರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.