ಕೋಲ್ಕತ್ತ: ರಾಜ್ಯ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಯೋಜನೆಗೆ ಸೋಮವಾರ ಪಶ್ಚಿಮ ಬಂಗಾಳದಲ್ಲಿ ಚಾಲನೆ ನೀಡಲಾಯಿತು. ಈ ಉಪಕ್ರಮವನ್ನು ಫಲಾನುಭವಿಗಳು ಸ್ವಾಗತಿಸಿದ್ದು, ಬಸ್ ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.
.ಬಿಹಾರ: ನೀಟ್ ಮರುಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಘೋಷಣೆ.
ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಅಭಿವೃದ್ಧಿ ಮತ್ತು ಸಮಾಜ ಕಲ್ಯಾಣ ಸಚಿವೆ ಅಗ್ನಿಮಿತ್ರ ಪಾಲ್, ಚುನಾವಣೆ ವೇಳೆಯಲ್ಲಿ ಬಿಜೆಪಿ ನೀಡಿದ ಪ್ರಮುಖ ಭರವಸೆಯನ್ನು ಈಡೇರಿಸಿದೆ ಎಂದು ಹೇಳಿದ್ದಾರೆ.

ದಕ್ಷಿಣ ಕೋಲ್ಕತ್ತದಲ್ಲಿ ಬಸ್ನಲ್ಲಿ ಪ್ರಯಾಣಿಸಿದ ಅವರು, ಉಚಿತ ಪ್ರಯಾಣದ ಟಿಕೆಟ್ ವಿತರಿಸಿದರು. ಸಮೀಪ ಹಾಗೂ ದೂರದ ಪ್ರಯಾಣಗಳಿಗೆ ಈ ಯೋಜನೆ ಅನ್ವಯವಾಗಲಿದೆ ಎಂದು ಹೇಳಿದ್ದಾರೆ.
.ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಕೇರಳಂ ಸಿಎಂ ಸತೀಶನ್ ಘೋಷಣೆ.
‘₹ 50, ₹100 ಕ್ಕೂ ಕಷ್ಟ ಪಡುವ ಹಲವು ಕುಟುಂಬಗಳು ಬಂಗಾಳದಲ್ಲಿವೆ’ ಎಂದು ಹೇಳಿದ ಅವರು, ಸಾರಿಗೆ ಸಂಸ್ಥೆಯ ಆದಾಯ ಹೆಚ್ಚಿಸುವ ಮಾರ್ಗಗಳನ್ನು ನೋಡಲಾಗುವುದು ಎಂದು ತಿಳಿಸಿದ್ದಾರೆ.

ಮಹಿಳೆಯರಿಗೆ ಉಚಿತ ಬಸ್ ನೀಡುವ ಯೋಜನೆಯನ್ನು ಹಿಂದಿನ ಸರ್ಕಾರ ಯೋಚಿಸಿಯೂ ಇಲ್ಲ, ಇದು ನಮ್ಮ ದೀರ್ಘಕಾಲದ ಕನಸಾಗಿತ್ತು. ಮಹಿಳೆಯರಲ್ಲಿ ಯಾರಾದರೂ ಟಿಕೆಟ್ ಖರೀದಿ ಮಾಡಿ ಪ್ರಯಾಣಿಸುವವರಿದ್ದರೆ ಅಭಿನಂದನಾರ್ಹ ಎಂದು ಹೇಳಿದ್ದಾರೆ.
.ಪಶ್ಚಿಮ ಬಂಗಾಳ: ಜೂನ್ 1ರಿಂದ ಮಹಿಳೆಯರಿಗೆ ಮಾಸಿಕ ₹3 ಸಾವಿರ, ಉಚಿತ ಬಸ್ ಪ್ರಯಾಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.