ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

WFI ಚುನಾವಣೆ: ಮತದಾರರ ಪಟ್ಟಿಯಲ್ಲಿ ಬ್ರಿಜ್ ಭೂಷಣ್ ಸಿಂಗ್, ಪುತ್ರನ ಹೆಸರಿಲ್ಲ

Published : 26 ಜುಲೈ 2023, 2:37 IST
Last Updated : 26 ಜುಲೈ 2023, 2:37 IST
ಫಾಲೋ ಮಾಡಿ
Comments

ನವದೆಹಲಿ: ಭಾರತ ಕುಸ್ತಿ ಫೆಡರೇಷನ್ ಚುನಾವಣೆಯ ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ಬ್ರಿಜ್ ಭೂಷಣ್ ಶರಣ್ ಸಿಂಗ್ ಹಾಗೂ ಅವರ ಪುತ್ರನ ಹೆಸರನ್ನು ಮತದಾರರ ಪಟ್ಟಿಯಿಂದ ಕೈ ಬಿಡಲಾಗಿದೆ ಎಂದು ಡಬ್ಲ್ಯುಎಫ್‌ಐ ತಿಳಿಸಿದೆ.

ಲೈಂಗಿಕ ಕಿರುಕುಳದ ಆರೋಪದಡಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅವರು ಕಳೆದ ತಿಂಗಳು ಕ್ರೀಡಾ ಸಚಿವರಾದ ಅನುರಾಗ್ ಠಾಕೂರ್ ಅವರೊಂದಿಗೆ ಸಭೆ ನಡೆಸಿ, ಬ್ರಿಜ್ ಭೂಷಣ್ ಅವರ ಕುಟುಂಬದಿಂದ ಯಾರೂ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದರು.

‘ತಮ್ಮ ಕುಟುಂಬವನ್ನು ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ(ಕುಸ್ತಿ) ಚುನಾವಣೆಯಿಂದ ಹೊರಗಿಡಬೇಕು. ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಯಾವುದೇ ವಿವಾದಗಳು ಮತ್ತೆ ಸೃಷ್ಟಿಯಾಗುವುದು ಬೇಡ‘ ಎಂದು ಬ್ರಿಜ್ ಭೂಷಣ್ ಹೇಳಿದ್ದಾರೆ.

ಮಂಗಳವಾರ ಅಂತಿಮಗೊಳಿಸಲಾದ ಚುನಾವಣಾ ಮತದಾರರ ಪಟ್ಟಿಯಲ್ಲಿ ಬ್ರಿಜ್ ಭೂಷಣ್ ಅವರ ಅಳಿಯನ ಒಬ್ಬರ ಹೆಸರು ಕಾಣಿಸಿಕೊಂಡಿದೆ. ಉಳಿದಂತೆ ಮತ್ತೊಬ್ಬ ಅಳಿಯ, ಮಾಜಿ ಜಂಟಿ ಕಾರ್ಯದರ್ಶಿ ಆದಿತ್ಯ ಪ್ರತಾಪ್ ಸಿಂಗ್ ಕೂಡ ಪಟ್ಟಿಯಿಂದ ಕೈ ಬಿಡಲಾಗಿದೆ.

ವರದಿಗಳ ಪ್ರಕಾರ, ಡಬ್ಲ್ಯುಎಫ್‌ಐ 25 ರಾಜ್ಯ ಘಟಕಗಳಿಂದ ಒಟ್ಟು 50 ಸದಸ್ಯರನ್ನು ಹೊಂದಿದೆ. ಅಧ್ಯಕ್ಷರು ಸೇರಿದಂತೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಲು ಇದೇ ಆಗಸ್ಟ್1 ಕೊನೆಯ ದಿನಾಂಕವಾಗಿದೆ. ಮರುದಿನ ನಾಮಪತ್ರಗಳ ಪರಿಶೀಲನೆ ನಡೆಸಿ, ಆಗಸ್ಟ್ 7 ರಂದು ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಅಗತ್ಯವಿದ್ದಲ್ಲಿ ಆಗಸ್ಟ್ 12 ರಂದು ಮತದಾನ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT