ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂದ್ರಯಾನ 2ರ ತಪ್ಪು ಮರುಕಳಿಸದಂತೆ ಚಂದ್ರಯಾನ-3ರಲ್ಲಿ ಏನು ಎಚ್ಚರ ವಹಿಸಿದ್ದಾರೆ?

Published 23 ಆಗಸ್ಟ್ 2023, 6:32 IST
Last Updated 23 ಆಗಸ್ಟ್ 2023, 6:32 IST
ಅಕ್ಷರ ಗಾತ್ರ

ಬೆಂಗಳೂರು: ಚಂದ್ರಯಾನ–2 ರಲ್ಲಿ ಕೊನೆ ಗಳಿಗೆಯಲ್ಲಿ ಲ್ಯಾಂಡರ್‌ ನೆಲಕ್ಕೆ ಅಪ್ಪಳಿಸಿತ್ತು. ಆಗ ಕೆಲವು ಸನ್ನಿವೇಶಗಳನ್ನು ನಿಭಾಯಿಸಲು ಆಗಲಿಲ್ಲ. ಈ ಬಾರಿ ಎದುರಾಗಬಹುದಾದ ಎಲ್ಲ ರೀತಿಯ ಸವಾಲುಗಳನ್ನು ಮುಂಚಿತವಾಗಿ ಗ್ರಹಿಸಿಯೇ ಅದಕ್ಕೆ ಪರಿಹಾರೋಪಾಯಗಳನ್ನು ಉಪಕರಣಗಳ ಮೂಲಕ ಅಡಕಗೊಳಿಸಲಾಗಿದೆ. ಅವು ಎದುರಾಗಬಹುದಾದ ಸವಾಲುಗಳನ್ನು ಗ್ರಹಿಸಿ ಅವುಗಳನ್ನು ನಿವಾರಿಸಿಕೊಳ್ಳುತ್ತವೆ. 

* ಕಳೆದ ಬಾರಿ ಲ್ಯಾಂಡಿಂಗ್ ಪ್ರದೇಶ ಚಿಕ್ಕದಾಗಿತ್ತು. ವಿಕ್ರಮ್‌ಗೆ ಅದು ಸಮಸ್ಯೆಯಾಗಿತ್ತು. ಈ ಬಾರಿ ಲ್ಯಾಂಡಿಂಗ್‌ ಪ್ರದೇಶದ ವಿಸ್ತೀರ್ಣ 2.5x4 ಕಿ.ಮೀ ಹೆಚ್ಚಿಸಲಾಗಿದೆ. ಅಧಿಕ ಸಾಮರ್ಥ್ಯದ ಆಧುನಿಕ ಉಪಕರಣಗಳನ್ನೂ ಅಳವಡಿಸಲಾಗಿದೆ.

ಇದನ್ನೂ ಓದಿ: Chandrayaan-3: ಎರಡು ಹಂತಗಳಲ್ಲಿ ವಿಕ್ರಮ್ ಲ್ಯಾಂಡರ್ ಇಳಿಸುವ ಪ್ರಯತ್ನ

*ಲ್ಯಾಂಡರ್‌ನ ವೇಗ ನಿಯಂತ್ರಣವೇ ಇಳಿಸುವ ಪ್ರಕ್ರಿಯೆಯ ಅತಿ ಮುಖ್ಯ ಅಂಶ. ವೇಗ ನಿಯಂತ್ರಿಸುವಾಗ ಲ್ಯಾಂಡರ್‌ ಬೀಳುವ ಸಂದರ್ಭದಲ್ಲಿ ಎಷ್ಟು ಎತ್ತರದಲ್ಲಿದೆ ವೇಗ ಎಷ್ಟಿದೆ ತಿರುಗುತ್ತಾ ಬೀಳುತ್ತಿದೆಯೇ ಅಥವಾ ಗಿರಗಿಟ್ಲೆಯಂತೆ ತಿರುಗುತ್ತಿದೆಯೆ ಎಂಬುದನ್ನು ಕ್ಷಣ ಮಾತ್ರದಲ್ಲಿ ಗ್ರಹಿಸಿ ಅದನ್ನು ಸರಿಪಡಿಸಿಕೊಳ್ಳುತ್ತದೆ.

*ಇದರಲ್ಲಿ ತಂತ್ರಾಂಶವನ್ನು ಬದಲಿಸಲಾಗಿದೆ. ವೈಫಲ್ಯಗಳನ್ನೇ ಗಮನದಲ್ಲಿಟ್ಟುಕೊಂಡು ಅವುಗಳಿಗೆ ಪರಿಹಾರ ನಿಟ್ಟಿನಲ್ಲಿ ಈ ತಂತ್ರಾಂಶ ರೂಪಿಸಲಾಗಿದೆ.

ಇದನ್ನೂ ಓದಿ: ಇಂದು ಚಂದ್ರ ಚುಂಬನ: ವಿಶ್ವದೆಲ್ಲೆಡೆ ಕುತೂಹಲ– ಯಶಸ್ಸಿಗೆ ಹಾರೈಕೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT