ನವದೆಹಲಿ: ವಿಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಕುರಿತು ಚರ್ಚಿಸಲು ನಿಮಗೆ ಯಾವಾಗ ಧೈರ್ಯ ಬರುತ್ತದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಪ್ರಶ್ನಿಸಿದ್ದಾರೆ.
ಮಣಿಪುರ ಸ್ಥಿತಿಗತಿ ಕುರಿತಂತೆ ಚರ್ಚೆಗೆ ಒತ್ತಾಯಿಸಿ ವಿಪಕ್ಷಗಳು ರಾಜ್ಯಸಭೆಯಲ್ಲಿ ಬುಧವಾರವೂ ಗದ್ದಲ ಎಬ್ಬಿಸಿದವು. ಇದರಿಂದಾಗಿ ಸುಗಮ ಕಲಾಪಕ್ಕೆ ಅಡ್ಡಿಯಾಯಿತು.
ಪ್ರಶ್ನೋತ್ತರ ವೇಳೆಯಲ್ಲಿ ಮಣಿಪುರದ ಬಗ್ಗೆ ಮಹಿಳಾ ಸಚಿವಯರು ಏಕೆ ಪ್ರತಿಕ್ರಿಯಿಸುತ್ತಿಲ್ಲ ಎಂದು ಕಾಂಗ್ರೆಸ್ ಸಂಸದೆ ಅಮೀ ಯಾಗ್ನಿಕ್ ಪ್ರಶ್ನಿಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ, ಮಹಿಳಾ ಸಚಿವರು ಹಾಗೂ ಮಹಿಳಾ ರಾಜಕಾರಣಿಗಳು ಮಣಿಪುರದ ಬಗ್ಗೆ ಮಾತ್ರವಲ್ಲ ರಾಜಸ್ಥಾನ, ಛತ್ತೀಸ್‌ಗಢ, ಬಿಹಾರದ ಬಗ್ಗೆಯೂ ಮಾತನಾಡುತ್ತಾರೆ. ರಾಜಸ್ಥಾನ, ಛತ್ತೀಸ್‌ಗಢ, ಬಿಹಾರದ ಬಗ್ಗೆ ಚರ್ಚಿಸಲು ನಿಮಗೆ ಯಾವಾಗ ಧೈರ್ಯ ಬರುತ್ತದೆ ಹೇಳಿ ಎಂದು ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಬಗ್ಗೆ ಮಾತನಾಡಲು ನಿಮಗೆ ಯಾವಾಗ ಧೈರ್ಯ ಬರುತ್ತದೆ? ಎಂದು ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.