ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದಲ್ಲಿ ಭಯೋತ್ಪಾದನೆ ಅಂತ್ಯವಾಗಿದೆಯಾ? : ಮೆಹಬೂಬಾ ಮುಫ್ತಿ

Last Updated 27 ಫೆಬ್ರುವರಿ 2023, 12:59 IST
ಅಕ್ಷರ ಗಾತ್ರ

ಶ್ರೀನಗರ : ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಸಹಜ ಸ್ಥಿತಿಗೆ ಮರಳಿದೆ ಮತ್ತು ಭಯೋತ್ಪಾದನೆ ಕೊನೆಗೊಂಡಿದೆ ಎಂದು ಪ್ರಚಾರ ಮಾಡುತ್ತಿದೆ. ಹಾಗಿದ್ದರೆ ಭಾನುವಾರ ಕಾಶ್ಮೀರಿ ಪಂಡಿತ ವ್ಯಕ್ತಿಯನ್ನು ಕೊಂದಿದ್ದು ಯಾರು ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಪ್ರಶ್ನಿಸಿದ್ದಾರೆ.

ಕಾಶ್ಮೀರಿ ಪಂಡಿತರ ಹತ್ಯೆಯನ್ನು ಕಾಶ್ಮೀರಿ ಮುಸ್ಲಿಮರೇ ನಾಚಿಕೆಗೇಡು ಎನ್ನುತ್ತಿದ್ದಾರೆ ಮತ್ತು ಜಮ್ಮು ಮತ್ತು ಕಾಶ್ಮೀರ ಸಹಜ ಸ್ಥಿತಿಗೆ ಮರಳಿದೆ ಎಂಬ ಕೇಂದ್ರ ಸರ್ಕಾರದ ಹೇಳಿಕೆಯನ್ನು ವಿರೋಧಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಮುಫ್ತಿ ಕಿಡಿಕಾರಿದರು.

ಎಟಿಎಂ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಸಂಜಯ್ ಶರ್ಮಾ (40) ಅವರನ್ನು ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಪುಲ್ವಾಮಾ ಜಿಲ್ಲೆಯ ಅಚಾನ್ ಪ್ರದೇಶದಲ್ಲಿನ ಅವರ ನಿವಾಸದ ಬಳಿ ಭಯೋತ್ಪಾದಕರು ಗುಂಡಿಟ್ಟು ಹತ್ಯೆ ಮಾಡಿದ್ದರು.

ಪುಲ್ವಾಮಾದಲ್ಲಿರುವ ಶರ್ಮಾ ಅವರ ನಿವಾಸಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಮುಫ್ತಿ, ಸರ್ಕಾರ ಭಯೋತ್ಪಾದನೆ ನಿರ್ಮೂಲನೆ ಮಾಡಿರುವುದಾಗಿ ಹೇಳುತ್ತಿದೆ. ಹಾಗಿದ್ದಲ್ಲಿ, ಶರ್ಮಾ ಅವರನ್ನು ಕೊಂದವರು ಯಾರು? ಸರ್ಕಾರ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದರು.

ಶರ್ಮಾ ಹತ್ಯೆಯಿಂದ ಕಾಶ್ಮೀರಿ ಮುಸ್ಲಿಮರೇ ನಾಚಿಕೆಪಡುತ್ತಿದ್ದಾರೆ. 1947 ರಲ್ಲಿ ಕಣಿವೆ ರಾಜ್ಯ ಕೋಮುಗಲಭೆಗಳಿಂದ ನಲುಗುತ್ತಿದ್ದಾಗ ಕಣಿವೆಯಲ್ಲಿ ವಾಸಿಸುತ್ತಿದ್ದ ಕಾಶ್ಮೀರಿ ಪಂಡಿತರು, ಹಿಂದೂಗಳು ಮತ್ತು ಸಿಖ್ಖರನ್ನು ರಕ್ಷಿಸಲು ಎಲ್ಲವನ್ನೂ ಪಣಕ್ಕಿಟ್ಟವರು ನಾವು. ಇಂದು ಅದೇ ಕಾಶ್ಮೀರಿ ಮುಸ್ಲಿಮರು ಅಸಹಾಯಕರಾಗಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಇಂದು ಕಾಶ್ಮೀರಿ ಮುಸ್ಲಿಮರು ಸಂಕಷ್ಟದಲ್ಲಿದ್ದಾರೆ. ಭಯೋತ್ಪಾದನೆ ಕೊನೆಗೊಳಿಸುವ ಹೆಸರಿನಲ್ಲಿ ಕೇಂದ್ರ ಸರ್ಕಾರ ಸಾವಿರಾರು ಯುವಕರನ್ನು ಜೈಲಿಗೆ ಹಾಕಿದೆ. ಮನೆಗಳನ್ನು ಸೀಲ್ ಮಾಡಲಾಗಿದೆ. ಎನ್‌ಐಎ, ಇಡಿ ದಾಳಿಗಳನ್ನು ನಡೆಸಲಾಗುತ್ತಿದೆ ಎಂದು ಮುಫ್ತಿ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT