ಮುಂಬೈ: ‘ತೌತೆ’ ಚಂಡಮಾರುತದಿಂದ ಮಹಾರಾಷ್ಟ್ರದಲ್ಲಿ ಆದ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಏಕೆ ವೈಮಾನಿಕ ಸಮೀಕ್ಷೆ ನಡೆಸುತ್ತಿಲ್ಲ’ ಎಂದು ಎನ್‌ಸಿಪಿಯು ಬುಧವಾರ ಪ್ರಶ್ನಿಸಿದೆ.

‘ಪ್ರಧಾನಿ ಮೋದಿ ಅವರು ಬುಧವಾರ ಗುಜರಾತ್ ಮತ್ತು ನೆರೆಯ ಕೇಂದ್ರಾಡಳಿತ ಪ್ರದೇಶ ದಿಯುವಿನ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಆದರೆ ಮಹಾರಾಷ್ಟ್ರದಲ್ಲಿ ಈ ರೀತಿಯ ಸಮೀಕ್ಷೆಯನ್ನು ನಡೆಸಿಲ್ಲ. ಇದು ತಾರತಮ್ಯ ಅಲ್ಲವೇ?’ ಎಂದು ಎನ್‌ಸಿಪಿಯ ರಾಷ್ಟ್ರೀಯ ವಕ್ತಾರ ನವಾಬ್ ಮಲೀಕ್ ಅವರು ಟ್ವೀಟ್ ಮಾಡಿದ್ದಾರೆ.

ತೌತೆ ಚಂಡಮಾರುತವು ಸೋಮವಾರ ಮಧ್ಯರಾತ್ರಿ ಗುಜರಾತ್ ಪ್ರವೇಶಿಸುವುದಕ್ಕೂ ಮುನ್ನ ಮಹಾರಾಷ್ಟ್ರದ ಕರಾವಳಿ ಭಾಗದಲ್ಲೂ ಹಾನಿಯನ್ನುಂಟು ಮಾಡಿದೆ. ಏಳು ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.