ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಒಂದು ವರ್ಷದ ಬಳಿಕ ಎಸ್‌ಐಟಿ ರಚಿಸಿದ್ದು ಏಕೆ?: ಬಂಗಾಳ ಸರ್ಕಾರಕ್ಕೆ ಹೈಕೋರ್ಟ್

Published 22 ಆಗಸ್ಟ್ 2024, 13:57 IST
Last Updated 22 ಆಗಸ್ಟ್ 2024, 13:57 IST
ಅಕ್ಷರ ಗಾತ್ರ

ಕೋಲ್ಕತ್ತ: ಆರ್‌.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹಣಕಾಸು ಅವ್ಯವಹಾರದ ಆರೋಪಗಳು ಕೇಳಿಬಂದ ಒಂದು ವರ್ಷದ ನಂತರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದು ಏಕೆ ಎಂದು ಕಲ್ಕತ್ತ ಹೈಕೋರ್ಟ್ ಗುರುವಾರ ಪಶ್ಚಿಮ ಬಂಗಾಳ ಸರ್ಕಾರವನ್ನು ಕೇಳಿದೆ.

ಸರ್ಕಾರಿ ಸ್ವಾಮ್ಯದ ಆರ್‌.ಜಿ ಕರ್ ಆಸ್ಪತ್ರೆಯ ಮಾಜಿ ಉಪ ಅಧೀಕ್ಷಕ ಅಖ್ತರ್ ಅಲಿ ಅವರು ತಮ್ಮ ಅಧಿಕಾರಾವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅಕ್ರಮಗಳ ಬಗ್ಗೆ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ವಿರುದ್ಧ ಜಾರಿ ನಿರ್ದೇಶನಾಲಯದಿಂದ (ಇ.ಡಿ) ತನಿಖೆ ನಡೆಸುವಂತೆ ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ರಾಜರ್ಷಿ ಭಾರದ್ವಾಜ್‌ ಅವರು, ಆರೋಪ ಬೆಳಕಿಗೆ ಬಂದ ಒಂದು ವರ್ಷದ ಬಳಿಕ ಎಸ್‌ಐಟಿ ರಚಿಸಿದ್ದು ಏಕೆ ಎಂದು ಕೇಳಿದರು. 

ಘೋಷ್‌ ಅವರು ಹಣಕಾಸಿನ ಅವ್ಯವಹಾರದಲ್ಲಿ ತೊಡಗಿದ್ದಾರೆ ಎಂಬುದನ್ನು 2023ರಲ್ಲೇ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದೆ ಎಂದು ಅಲಿ ಹೇಳಿದ್ದರು.

ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ (ಆಗಸ್ಟ್‌ 9) ಬೆನ್ನಲ್ಲೇ ಘೋಷ್‌ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ವೈದ್ಯಕೀಯ ಕಾಲೇಜಿನಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರ ಆರೋಪಗಳ ಬಗ್ಗೆ ತನಿಖೆಗೆ ಬಂಗಾಳ ಸರ್ಕಾರ ಆಗಸ್ಟ್‌ 20ರಂದು ಎಸ್‌ಐಟಿ ರಚನೆ ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT