ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಕಾಡಾನೆ ದಾಳಿಯಿಂದ ವ್ಯಕ್ತಿ ಸಾವು

Published 1 ಏಪ್ರಿಲ್ 2024, 5:09 IST
Last Updated 1 ಏಪ್ರಿಲ್ 2024, 5:09 IST
ಅಕ್ಷರ ಗಾತ್ರ

ಪಟ್ಟನಂತಿಟ್ಟ: ಕಾಡಾನೆ ದಾಳಿಯ ಪರಿಣಾಮ 53 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯ ತುಳಪ್ಪಲ್ಲಿ ಗ್ರಾಮದಲ್ಲಿ ನಡೆದಿದೆ.

ಆಟೋ ಚಾಲಕ ಬಿಜು ಮೃತ ವ್ಯಕ್ತಿ. ಎರುಮೇಲಿ ಶಬರಿಮಲೆ ಅರಣ್ಯ ಮಾರ್ಗದಲ್ಲಿನ ಮನೆಯ ಬಳಿ ಘಟನೆ ನಡೆದಿದೆ. ಆನೆ ಬೆಳೆಗಳನ್ನು ನಾಶಪಡಿಸುವ ಶಬ್ದವನ್ನು ಕೇಳಿ ಬಿಜು ಮನೆಯಿಂದ ಹೊರಗೆ ಬಂದಿದ್ದಾರೆ. ಈ ವೇಳೆ ಆನೆ ದಾಳಿ ನಡೆಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಿಜು ಮನೆಯ ಸಮೀಪ ಶವವಾಗಿ ಪತ್ತೆಯಾಗಿದ್ದಾರೆ ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ ಬಳಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಬಿಜು ಶವವನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಿದ್ದಾರೆ.

ಕೇರಳದಲ್ಲಿ ಕಳೆದ ಕೆಲವು ತಿಂಗಳುಗಳಲ್ಲಿ ಕಾಡಾನೆಗಳ ದಾಳಿಯಿಂದ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT