ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರಾಖಂಡದಲ್ಲಿ ಮತ್ತೆ ಕಾಳ್ಗಿಚ್ಚು

Published 31 ಮೇ 2024, 18:32 IST
Last Updated 31 ಮೇ 2024, 18:32 IST
ಅಕ್ಷರ ಗಾತ್ರ

ಡೆಹ್ರಾಡೂನ್‌: ಉತ್ತರಾಖಂಡದಲ್ಲಿ ಮತ್ತೊಮ್ಮೆ ಭಾರಿ ಪ್ರಮಾಣದ ಕಾಳ್ಗಿಚ್ಚು ಸಂಭವಿಸಿದೆ. ರಾಜ್ಯದ ವಿವಿಧೆಡೆ ಒಟ್ಟು 11 ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 13 ಹೆಕ್ಟೇರ್‌ಗೂ ಹೆಚ್ಚಿನ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜಾಜಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗೌಹರಿ ವಲಯದಲ್ಲಿ ಗುರುವಾರ ಸಂಜೆ ಬೆಂಕಿ ಬಿದ್ದು, 1.5 ಹೆಕ್ಟೇರ್‌ನಷ್ಟು ಅರಣ್ಯವನ್ನು ಆವರಿಸಿತ್ತು. ಸದ್ಯ ಕ್ಷಿಪ್ರ ಕಾರ್ಯಾಚರಣೆ ಮೂಲಕ ಈ ಪ್ರದೇಶದಲ್ಲಿ ಬೆಂಕಿಯನ್ನು ಹತೋಟಿಗೆ ತರಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಹೃಷಿಕೇಶದ ನೀಲಕಂಠ ದೇವಾಲಯ ಚಾರಣ ಮಾರ್ಗದಲ್ಲಿನ ಪುಂಡರಾಸು ಬಳಿ ಬೆಂಕಿಯು ಒಂದು ಹೆಕ್ಟೇರ್‌ನಷ್ಟು ಅರಣ್ಯವನ್ನು ವ್ಯಾಪಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದೆ. ಅರಣ್ಯ ರಕ್ಷಕ ಸಿಬ್ಬಂದಿ, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಜಂಟಿಯಾಗಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT