ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿತೀಶ್‌ ಕುಮಾರ್‌ ಸಭೆಯಲ್ಲಿ ಪಾಲ್ಗೊಳ್ಳುವೆ: ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌

Published 20 ಜೂನ್ 2023, 15:57 IST
Last Updated 20 ಜೂನ್ 2023, 15:57 IST
ಅಕ್ಷರ ಗಾತ್ರ

ತಿರುವರೂರ್‌ : ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಇದೇ 23ರಂದು ಪಟ್ನಾದಲ್ಲಿ ಹಮ್ಮಿಕೊಂಡಿರುವ ಬಿಜೆಪಿಯೇತರ ಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರು ಮಂಗಳವಾರ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿ. ಎಂ. ಕರುಣಾನಿಧಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಇಲ್ಲಿ 'ಕಲೈನಾರ್‌ ಕೂಟಂ' ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿಯನ್ನು ವಿರೋಧಿಸುವ ಪಕ್ಷಗಳ ಕೈ ಬಲಪಡಿಸುವುದಾಗಿಯೂ ತಿಳಿಸಿದ್ದಾರೆ.

ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT