ಗಿರಿಡೀಹ್ (ಜಾರ್ಖಂಡ್): ಅನ್ಯಾಯ ಮತ್ತು ಸರ್ವಾಧಿಕಾರಿ ಶಕ್ತಿಗಳ ವಿರುದ್ಧ ದಿಟ್ಟ ಹೋರಾಟ ನಡೆಸುತ್ತೇನೆ. ನಾನು, ನನ್ನ ಪತಿಯ ಹೆಜ್ಜೆ ಗುರುತುಗಳನ್ನೇ ಅನುಸರಿಸುತ್ತೇನೆ ಎಂದು ಹೇಮಂತ್ ಸೊರೇನ್ ಪತ್ನಿ, ಕಲ್ಪನಾ ಸೊರೇನ್ ಹೇಳಿದ್ದಾರೆ.
.ಭೂ ಹಗರಣ ಪ್ರಕರಣ: ಸೊರೇನ್ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ .ಹಣ ಅಕ್ರಮ ವರ್ಗಾವಣೆ ಪ್ರಕರಣ: ಹೇಮಂತ್ ಸೊರೇನ್ ಬಂಧನದ ಅವಧಿ ವಿಸ್ತರಣೆ.ಭ್ರಷ್ಟರನ್ನು ಬೆಂಬಲಿಸುವ ಬಿಜೆಪಿ: ಕಾಂಗ್ರೆಸ್ನ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪ.
ಬುಡಕಟ್ಟು ಜನಾಂಗದವರು ಯಾರಿಗೂ ತಲೆ ಬಾಗುವುದಿಲ್ಲ. ಜೈಲಿನಿಂದ ಹೊರಬರುವ ನನ್ನ ಪತಿ ಮತ್ತಷ್ಟು ಬಲಿಷ್ಠರಾಗಿರಲಿದ್ದಾರೆ ಎಂದು ಕಲ್ಪನಾ ಸೊರೇನ್ ಸುದ್ದಿ ಸಂಸ್ಥೆ ಪಿಟಿಐ ನಡೆಸಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ತಮ್ಮ ಪತಿಯ ಬಂಧನ ಅನಿರೀಕ್ಷಿತವಾಗಿದೆ. ಇದು ಜೆಎಂಎಂ ಪಕ್ಷಕ್ಕೆ ಹಾಗೂ ನಮ್ಮ ಕುಟುಂಬಕ್ಕೆ ಬಹುದೊಡ್ಡ ಆಘಾತವನ್ನು ಉಂಟುಮಾಡಿದೆ. ನಮಗೆ ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದೆ. ಜಾಮೀನಿನ ಮೇಲೆ ಹೇಮಂತ್ ಸೊರೇನ್ ಶೀಘ್ರವಾಗಿ ಹೊರಬರುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
.ಹೇಮಂತ್ ಸೊರೇನ್ಗೆ ಸೇರಿದ ₹ 31 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಪತ್ನಿ ಕಲ್ಪನಾ ನಾಮಪತ್ರ ಸಲ್ಲಿಕೆ .
ನಿರಾಪರಾಧಿಯನ್ನು ಗುರಿಯಾಗಿಸಿಕೊಂಡು ಕೇಂದ್ರದ ಬಿಜೆಪಿ ಸರ್ಕಾರ ಪಿತೂರಿ ನಡೆಸಿ, ಹೇಮಂತ್ ಸೊರೇನ್ ಅವರನ್ನು ಬಂಧಿಸಿದೆ. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ. ಸರ್ವಾಧಿಕಾರ ವಿರುದ್ಧ ಜನರು ಸಿಟ್ಟಿಗೆದ್ದಿದ್ದಾರೆ.

ನಿಮ್ಮ ಪತಿ ಜೈಲಿನಲ್ಲಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವಿರೋಧ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿಯೇ ಏಕೆ ಇ.ಡಿ ಅಧಿಕಾರಿಗಳಿಂದ ದಾಳಿ ನಡೆಯುತ್ತಿದೆ ಎಂಬ ಅನುಮಾನ ನನ್ನಲ್ಲಿದೆ ಎಂದು ಕಲ್ಪನಾ ಸೊರೇನ್ ಹೇಳಿದ್ದಾರೆ.

ಹೇಮಂತ್ ಸೊರೇನ್ ಅವರ ಬಂಧನವು ಅವರನ್ನು ಬಿಜೆಪಿಗೆ ಸೇರುವಂತೆ ಒತ್ತಡ ಹೇರುವ ರಾಜಕೀಯ ಪ್ರೇರಿತ ಪಿತೂರಿಯಾಗಿದೆ. ಅವರ ಬಂಧನವು ಕೇಂದ್ರ ಸರ್ಕಾರದ ಯೋಜನೆಯ ಭಾಗವಾಗಿದೆ. ಈ ಮೂಲಕ ಅವರನ್ನು( ಹೇಮಂತ್ ಸೊರೇನ್) ಬೆದರಿಸುವ, ಅವಮಾನಿಸುವ ಪ್ರಯತ್ನವಾಗಿದೆ. ಆದರೆ ಈ ಚುನಾವಣೆಯಲ್ಲಿ ಈ ಎಲ್ಲಕ್ಕೂ ಉತ್ತರ ಸಿಗಲಿದೆ ಎಂದಿದ್ದಾರೆ
.LSPolls:ಕೈಸರ್ಗಂಜ್ ಕ್ಷೇತ್ರದಿಂದ ಬ್ರಿಜ್ಭೂಷಣ್ ಮಗನನ್ನು ಕಣಕ್ಕಿಳಿಸಿದ ಬಿಜೆಪಿ.ನಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ ಚರ್ಚೆಗೆ ಬನ್ನಿ: ಮೋದಿ, ಬಿಜೆಪಿಗೆ ಖರ್ಗೆ ಪತ್ರ.
ನಿಮ್ಮ ಕುಟುಂಬದಲ್ಲಿ ಬಿರುಕು ಬಿಟ್ಟಿದೆಯೇ ಎಂಬುವುದಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಕುಟುಂಬದಲ್ಲಿ ಎಲ್ಲವೂ ಸರಿಯಿದೆ. ಗಾಂಡೇಯ್ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನನ್ನ ಪತಿಯ ಸಹೋದರ ಜತೆಗಿದ್ದರು ಎಂದು ಹೇಳಿದ್ದಾರೆ.
.ಬಿಜೆಪಿಗೆ 400 ಸೀಟು ಲಭ್ಯತೆ ಹಾಸ್ಯಾಸ್ಪದ, 300 ಅಸಾಧ್ಯ, 200 ಸವಾಲು: ಶಶಿ ತರೂರ್.ಪ್ರಜ್ವಲ್ರಿಂದ 400 ಮಹಿಳೆಯರ ಅತ್ಯಾಚಾರ; ಪ್ರಧಾನಿ ಕ್ಷಮೆಯಾಚಿಸಬೇಕು: ರಾಹುಲ್.
ನನಗೆ ರಾಜಕೀಯ ಎಂದಿಗೂ ಆಯ್ಕೆಯಾಗಿರಲಿಲ್ಲ, ಆದರೆ ರಾಜ್ಯ ಹಾಗೂ ಜೆಎಂಎಂ ಪಕ್ಷದಲ್ಲಿನ ಬದಲಾವಣೆಗಳಿಂದಾಗಿ ನಾನು ರಾಜಕೀಯಕ್ಕೆ ಬಂದೆ ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
.ಕೇಜ್ರಿವಾಲ್ ಬಂಧನ| ಮತದಾನದ ಮೂಲಕ ಜನರು ಉತ್ತರಿಸಲಿದ್ದಾರೆ: ಸುನಿತಾ ಕೇಜ್ರಿವಾಲ್.
ಎಂ.ಟೆಕ್ ಮತ್ತು ಎಂಬಿಎ ಪದವೀಧರೆಯಾಗಿರುವ ಕಲ್ಪನಾ ಅವರ ರಾಜಕೀಯ ಪಯಣ ಮಾರ್ಚ್ 4ರಂದು ನಡೆದ ಜೆಎಂಎಂ ಪಕ್ಷದ ಸ್ಥಾಪನಾ ದಿನದ ಕಾರ್ಯಕ್ರಮದಂದು ಆರಂಭವಾಯಿತು.

ಗಿರಿಡೀಹ್ ಜಿಲ್ಲೆಯ ಗಾಂಡೇಯ್ ಕ್ಷೇತ್ರದ ಶಾಸಕ ಸ್ಥಾನವು ಜೆಎಂಎಂ ಶಾಸಕ ಸರ್ಫರಾಜ್ ಅಹಮದ್ ಅವರ ರಾಜೀನಾಮೆಯಿಂದಾಗಿ ತೆರವಾಗಿತ್ತು. ಈ ಕ್ಷೇತ್ರದಲ್ಲಿ ಮೇ 20ರಂದು ಉಪ ಚುನಾವಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.