ಮುಂಬೈ: ಗಡಿ ವಿವಾದವನ್ನು ಮಹಾರಾಷ್ಟ್ರ ಮತ್ತೆ ಕೆದಕಿದೆ.

‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ಹೇಳಿದ್ದಾರೆ.

’ಬಹುಸಂಖ್ಯೆಯಲ್ಲಿ ಮರಾಠಿ ಮಾತನಾಡುವ ಮತ್ತು ಸಂಸ್ಕೃತಿ ಹೊಂದಿರುವ ಪ್ರದೇಶಗಳನ್ನು ಮಹಾರಾಷ್ಟಕ್ಕೆ ಸೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಗಡಿ ವಿಷಯಕ್ಕಾಗಿ ಹೋರಾಟ ನಡೆಸಿ ಹುತಾತ್ಮರಾದವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಇದಾಗಿದೆ’ ಎಂದು ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

‘ನಾವು ಒಗ್ಗಟ್ಟಾಗಿದ್ದೇವೆ. ಈ ವಿಷಯದಲ್ಲಿ ಬದ್ಧತೆಯನ್ನು ಪ್ರದರ್ಶಿಸುತ್ತೇವೆ. ಈ ಭರವಸೆಯೊಂದಿಗೆ ನಾವು ಹುತಾತ್ಮರಿಗೆ ಗೌರವ ಸಲ್ಲಿಸುತ್ತೇವೆ’ ಎಂದು ಟ್ವೀಟ್ ಮಾಡಲಾಗಿದೆ.

ಬೆಳಗಾವಿ ಮತ್ತು ಇತರ ಪ್ರದೇಶಗಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಣ ಗಡಿ ವಿವಾದ ಪ್ರಕರಣ ಹಲವು ವರ್ಷಗಳಿಂದ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ.

ಗಡಿ ವಿವಾದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸುವಂತೆ ಉಸ್ತುವಾರಿ ವಹಿಸಲು ಕಳೆದ ವರ್ಷ ಸಚಿವರಾದ ಏಕನಾಥ್ ಶಿಂಧೆ ಮತ್ತು ಛಗನ್ ಭುಜಬಲ್ ಅವರನ್ನು ಸಮನ್ವಯಕಾರರನ್ನಾಗಿ ಉದ್ಧವ್ ಠಾಕ್ರೆ ಅವರು ನೇಮಿಸಿದ್ದರು.

ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರತಿ ವರ್ಷ ಜನವರಿ 17ರಂದು ಹುತಾತ್ಮರ ದಿನವನ್ನು ಆಚರಿಸುತ್ತದೆ. ಬೆಳಗಾವಿ ಮತ್ತು ಇತರ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ 1956ರಲ್ಲಿ ನಡೆದ ಹೋರಾಟದಲ್ಲಿ ಮಡಿದವರ ಗೌರವಾರ್ಥ ಮಹಾರಾಷ್ಟ್ರ ಏಕೀಕರಣ ಸಮಿತಿ ಈ ದಿನವನ್ನು ಹುತಾತ್ಮರ ದಿನವನ್ನಾಗಿ ಆಚರಿಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.