ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ:  ದಿಗ್ವಿಜಯ ಸಿಂಗ್ ಸ್ಪಷ್ಟನೆ

Published 29 ಜನವರಿ 2024, 3:08 IST
Last Updated 29 ಜನವರಿ 2024, 3:08 IST
ಅಕ್ಷರ ಗಾತ್ರ

ರಾಜ್‌ಗಢ: ಮಧ್ಯಪ್ರದೇಶದ ಕಾಂಗ್ರೆಸ್‌ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಏಕೆಂದರೆ 'ನಾನು ರಾಜ್ಯಸಭಾ ಸದಸ್ಯನಾಗಿದ್ದೇನೆ. ಇನ್ನೂ ಎರಡು ವರ್ಷ ಅಧಿಕಾರವಧಿ ಉಳಿದಿದೆ'. ರಾಜ್‌ಗಢ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷ ನಿರ್ಧರಿಸಲಿದೆ  ಎಂದು ಸಿಂಗ್ ತಿಳಿಸಿದ್ದಾರೆ.

ಸಿಂಗ್ 2019ರಲ್ಲಿ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಬಿಜೆಪಿಯ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ 3.65 ಲಕ್ಷ ಮತಗಳ ಅಂತರದಿಂದ ಸೋತಿದ್ದರು.

ದಿಗ್ವಿಜಯ ಸಿಂಗ್ 1984 ಮತ್ತು 1991ರಲ್ಲಿ ರಾಜ್‌ಗಢ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದ ಒಟ್ಟು 29 ಸ್ಥಾನಗಳ ಪೈಕಿ ಬಿಜೆಪಿ 28 ಹಾಗೂ ಕಾಂಗ್ರೆಸ್ ಒಂದು ಸ್ಥಾನ ಗೆದ್ದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT