ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನಗೆ ಕಳುಹಿಸಿರುವ ಸಮನ್ಸ್‌ಗಳಷ್ಟು ಶಾಲೆಗಳನ್ನು ತೆರೆಯಲಾಗುವುದು: ಕೇಜ್ರಿವಾಲ್

Published 9 ಫೆಬ್ರುವರಿ 2024, 10:10 IST
Last Updated 9 ಫೆಬ್ರುವರಿ 2024, 10:10 IST
ಅಕ್ಷರ ಗಾತ್ರ

ನವದೆಹಲಿ: ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದೆ. ಕೇಂದ್ರದ ತನಿಖಾ ಸಂಸ್ಥೆಗಳು ನನಗೆ ರವಾನಿಸಿರುವ ಸಮನ್ಸ್‌ಗಳಷ್ಟು ಸಂಖ್ಯೆಯ ಶಾಲೆಗಳನ್ನು ರಾಷ್ಟ್ರ ರಾಜಧಾನಿಯಲ್ಲಿ ತೆರೆಯಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ಐದು ಬಾರಿ ಸಮನ್ಸ್‌ ಜಾರಿ ಮಾಡಿದರೂ ವಿಚಾರಣೆಗೆ ಕೇಜ್ರಿವಾಲ್ ಹಾಜರಾಗಿರಲಿಲ್ಲ. ಬಳಿಕ ಇ.ಡಿ ನೀಡಿದ ದೂರಿನ ಮೇರೆಗೆ ಕೇಜ್ರಿವಾಲ್, ಫೆಬ್ರುವರಿ 17ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿಯ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಮಯೂರ್ ವಿಹಾರ 3ನೇ ಹಂತದಲ್ಲಿ ಸರ್ಕಾರಿ ಶಾಲಾ ಕಟ್ಟಡದ ಶಂಕುಸ್ಥಾಪನೆಯ ಬಳಿಕ ಮಾತನಾಡಿದ ಕೇಜ್ರಿವಾಲ್, 'ದೇಶದ ಅತಿ ದೊಡ್ಡ ಭಯೋತ್ಪಾದಕ'ನಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು, ಎಲ್ಲ ತನಿಖಾ ಸಂಸ್ಥೆಗಳನ್ನು ತನ್ನ ವಿರುದ್ಧ ಛೂ ಬಿಟ್ಟಿದೆ ಎಂದು ಆರೋಪಿಸಿದರು.

ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮುಂದಿನ ಒಂದು ಪೀಳಿಗೆಯೊಳಗೆ ಬಡತನ ನಿರ್ಮೂಲನೆಯಾಗಲಿದೆ. ಈ ಗುರಿಯನ್ನು ಸಾಧಿಸಲು ದೆಹಲಿಯಲ್ಲಿ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಹೇಳಿದರು.

ಹಿಂದೆ ಸರ್ಕಾರಿ ಶಾಲೆಗಳ ಸ್ಥಿತಿ ಶೋಚನೀಯವಾಗಿತ್ತು. ಶಿಕ್ಷಣವು ಕಳಪೆ ಮಟ್ಟದಲ್ಲಿತ್ತು. ಆದರೆ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರ ರಚನೆಯಾದ ಬಳಿಕ ಅನೇಕ ಶಾಲೆಗಳನ್ನು ತೆರೆಯಲಾಗಿದೆ. ದೆಹಲಿಯಲ್ಲಿ ಎಲ್ಲರಿಗೂ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ದೊರಯಲಿದೆ. ಹಳೆಯ ಕಟ್ಟಡಗಳ ಬದಲಿಗೆ ಹೊಸ ಶಾಲಾ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಹೊಸ ಶಾಲೆಗಳಲ್ಲಿ ಪ್ರಯೋಗಾಲಯ, ಗ್ರಂಥಾಲಯ ಸೇರಿದಂತೆ ಅತ್ಯುತ್ತಮ ಮೂಲಸೌಕರ್ಯಗಳನ್ನು ಒಳಗೊಂಡಿರಲಿದೆ ಎಂದು ಅವರು ಹೇಳಿದರು.

ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಕನಸನ್ನು ಈಡೇರಿಸಲಾಗುತ್ತಿದೆ ಎಂದು ಅವರು ಪ್ರತಿಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT