ಚೆನ್ನೈ: ‘ಮಹಾರಾಷ್ಟ್ರದಲ್ಲಿ ಮರಾಠಿ ಕಲಿಕೆ ಕಡ್ಡಾಯಗೊಳಿಸಿದ ಅಲ್ಲಿನ ರಾಜ್ಯ ಸರ್ಕಾರದ ಆದೇಶದ ಬೆನ್ನಲ್ಲೇ, ತ್ರಿಭಾಷಾ ಕಲಿಕೆ ಕುರಿತು ರಾಜ್ಯಗಳಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಒತ್ತಾಯಿಸಿದ್ದಾರೆ.

‘ನೂತನ ಶಿಕ್ಷಣ ನೀತಿ (ಎನ್ಇಪಿ) ಅಡಿಯಲ್ಲಿ ಮೂರನೇ ಭಾಷೆಯನ್ನು ಕಡ್ಡಾಯವಾಗಿ ಕಲಿಸುವುದನ್ನು ಕೈಬಿಡಬೇಕು. ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿ ಭಾಷೆಯನ್ನು ಕಡ್ಡಾಯ ಹೇರಿಕೆ ಮಾಡುವ ಮೂಲಕ ಭಯದ ವಾತಾವರಣ ಸೃಷ್ಟಿಸುತ್ತಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ’ ಎಂದು ತಿಳಿಸಿದ್ದಾರೆ.

‘ಮರಾಠಿ ಕಲಿಕೆ ಕಡ್ಡಾಯಗೊಳಿಸಿರುವ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿಕೆ ನೀಡಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರು ಸ್ಪಷ್ಟನೆ ನೀಡಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.