ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಮೇಠಿ, ರಾಯ್‌ಬರೇಲಿಯಲ್ಲಿ ಭಾರಿ ಅಂತರದಿಂದ ಕಾಂಗ್ರೆಸ್‌ ಗೆಲ್ಲಲಿದೆ: ಬಘೆಲ್‌

Published 11 ಮೇ 2024, 8:53 IST
Last Updated 11 ಮೇ 2024, 8:53 IST
ಅಕ್ಷರ ಗಾತ್ರ

ರಾಯ್‌ಬರೇಲಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಅಮೇಠಿ ಮತ್ತು ರಾಯ್‌ಬರೇಲಿ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್‌ ಬಘೆಲ್‌ ಹೇಳಿದ್ದಾರೆ.

ಅಮೇಠಿ ಹಾಗೂ ರಾಯ್‌ಬರೇಲಿ ಎರಡೂ ಕ್ಷೇತ್ರಗಳು ಗಾಂಧಿ ಕುಟುಂಬದೊಂದಿಗೆ ನಿಕಟ ಸಂಬಂಧವನ್ನು ಹೊಂದಿವೆ. ಇಂದಿರಾ ಗಾಂಧಿ ಅವರಿಂದ ಹಿಡಿದು ಸಂಜಯ್‌ ಗಾಂಧಿ, ರಾಜೀವ್‌ ಗಾಂಧಿ, ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಎಲ್ಲರೂ ಈ ಎರಡು ಕ್ಷೇತ್ರಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

‘ರಾಹುಲ್ ಗಾಂಧಿ ಅವರನ್ನು ರಾಯ್‌ಬರೇಲಿಯಿಂದ ಕಣಕ್ಕಿಳಿಸಿರುವುದು ಹೈಕಮಾಂಡ್‌ನ ನಿರ್ಧಾರವಾಗಿದೆ. ನಮ್ಮ ನಾಯಕರು ಈಗಾಗಲೇ ಅದರ ಕುರಿತು ಮಾತನಾಡಿದ್ದಾರೆ. ಕಿಶೋರಿ ಲಾಲ್‌ ಶರ್ಮಾ ಅವರು 40 ವರ್ಷಗಳಿಂದ ಜನರ ಸೇವೆ ಮಾಡುತ್ತಿದ್ದಾರೆ. ಶರ್ಮಾ ಅವರು ಹೆಚ್ಚಿನ ಮತಗಳನ್ನು ಗಳಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರನ್ನು ಸೋಲಿಸುತ್ತಾರೆ. ಕಾಂಗ್ರೆಸ್‌ ಎರಡೂ ಸ್ಥಾನಗಳಲ್ಲೂ ದೊಡ್ಡ ಅಂತರದಿಂದ ಗೆಲುವು ಸಾಧಿಸುತ್ತದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಬಘೆಲ್‌ ಹೇಳಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ಅಮೇಠಿಯಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಬಿಜೆಪಿ ನಾಯಕಿ ಸ್ಮೃತಿ ಇರಾನಿ ವಿರುದ್ಧ ಪರಾಭವಗೊಂಡಿದ್ದರು. ಈ ಬಾರಿ ಕಿಶೋರಿ ಲಾಲ್ ಶರ್ಮಾ ಅವರು ಸ್ಮೃತಿ ಇರಾನಿ ಅವರಿಗೆ ಪೈಪೋಟಿ ನೀಡಲಿದ್ದಾರೆ. ರಾಹುಲ್‌ ಗಾಂಧಿ ಅವರು ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT