ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ 7ರಿಂದ 29ರವರೆಗೆ

Last Updated 19 ನವೆಂಬರ್ 2022, 13:49 IST
ಅಕ್ಷರ ಗಾತ್ರ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 7ರಿಂದ 29ರವರೆಗೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ನೂತನ ಸಂಸತ್ ಭವನದ ಕಾಮಗಾರಿಯು ಇನ್ನೂ ಬಾಕಿ ಉಳಿದಿರುವ ಕಾರಣ ಅಧಿವೇಶನವನ್ನು ಹಳೆಯ ಸಂಸತ್ ಭವನದಲ್ಲೇ ನಡೆಸುವ ಸಾಧ್ಯತೆಯಿದೆ.

ಪ್ರತ್ಯೇಕ ಅಧಿಸೂಚನೆಗಳಲ್ಲಿ, ಲೋಕಸಭೆ ಹಾಗೂ ರಾಜ್ಯಸಭೆಯ ಕಾರ್ಯದರ್ಶಿಗಳು ದಿನಾಂಕಗಳನ್ನು ಸೂಚಿಸಿದ್ದಾರೆ.

ಅಧಿವೇಶನ ಆರಂಭಕ್ಕೂ ಮುನ್ನ ಲೋಕಸಭೆಯ ಸ್ಪೀಕರ್ ಹಾಗೂ ರಾಜ್ಯಸಭಾಧ್ಯಕ್ಷರು ಸುಗಮ ಕಲಾಪಕ್ಕಾಗಿ ಸರ್ವ ಪಕ್ಷಗಳ ಸಭೆ ಕರೆಯಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT