ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid India Update| ಇಂದು 18,166 ಪ್ರಕರಣ: 7 ತಿಂಗಳಲ್ಲೇ ಅತ್ಯಂತ ಕಡಿಮೆ

Last Updated 10 ಅಕ್ಟೋಬರ್ 2021, 4:17 IST
ಅಕ್ಷರ ಗಾತ್ರ

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 18,166 ಹೊಸ ಕೋವಿಡ್ -19 ಪ್ರಕರಣಗಳು ಮತ್ತು 214 ಸಾವುಗಳು ವರದಿಯಾಗಿದೆ, ಇದೇ ಅವಧಿಯಲ್ಲಿ 23,624 ಜನರು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ.

ಕಳೆದ 214 ದಿನಗಳಲ್ಲಿ ಅತ್ಯಂತ ಕಡಿಮೆ ಸಂಖ್ಯೆಯ ಪ್ರಕರಣಗಳು ಇಂದು ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳಿಂದ ಗೊತ್ತಾಗಿದೆ.

ಭಾನುವಾರದ ಅಂಕಿಅಂಶಗಳು ಭಾರತದ ಕೊರೊನಾ ವೈರಸ್‌ ಸಾವಿನ ಸಂಖ್ಯೆಯನ್ನು 4,50,589 ಕ್ಕೆ ಏರಿಸಿದೆ.
ಭಾರತದಲ್ಲಿ ಕೋವಿಡ್‌ನಿಂದ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣವು ಶೇಕಡಾ 97.99 ಆಗಿದ್ದು, ಈ ವರೆಗೆ ಒಟ್ಟು 3,32,71,915 ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಸದ್ಯ 2,30,971 ಸಕ್ರಿಯ ಪ್ರಕರಣಗಳಿವೆ.

ರಾಷ್ಟ್ರೀಯ ರೋಗನಿರೋಧಕ ಅಭಿಯಾನದ ಅಡಿಯಲ್ಲಿ ಸರ್ಕಾರವು ಇದುವರೆಗೆ 94.70 ಕೋಟಿ ಡೋಸ್ ಕೋವಿಡ್ -19 ಲಸಿಕೆಗಳನ್ನು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT