ನವದೆಹಲಿ: ‘ಸಮಾಜದಲ್ಲಿ ದೊಡ್ಡ ಪ್ರಮಾಣದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎದುರಿಸುತ್ತಿರುವ ರಚನಾತ್ಮಕ ಅಸಮಾನತೆಯನ್ನು ಹೋಗಲಾಡಿಸದೆ, ಯಾವುದೇ ರಾಷ್ಟ್ರವೂ ನಿಜವಾದ ಪ್ರಜಾಪ್ರಭುತ್ವವಿದೆ ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ’ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್.ಗವಾಯಿ ತಿಳಿಸಿದರು.

‘ದೀರ್ಘಾವಧಿಯ ಸ್ಥಿರತೆ, ಸಾಮಾಜಿಕ ಒಗ್ಗಟ್ಟು ಹಾಗೂ ಸುಸ್ಥಿರ ಅಭಿವೃದ್ಧಿ ಸಾಧಿಸಲು ಪ್ರತಿಯೊಬ್ಬರಿಗೂ ಸಾಮಾಜಿಕ–ಆರ್ಥಿಕ ನ್ಯಾಯ ಒದಗಿಸುವುದು ಅಗತ್ಯವಾಗಿದೆ’ ಎಂದು ಒತ್ತಿ ಹೇಳಿದರು.

‘ಸಾಮಾಜಿಕ ಹಾಗೂ ಆರ್ಥಿಕ ಸಮಾನತೆ ತರುವ ನಿಟ್ಟಿನಲ್ಲಿ ಸಂವಿಧಾನದ ಪಾತ್ರ: ಭಾರತೀಯ ಸಂವಿಧಾನದ 75 ವರ್ಷದ ಚಿಂತನೆಗಳು’ ಕುರಿತಾಗಿ ಇಟಲಿಯ ಮಿಲಾನ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ನ್ಯಾಯದಾನವೆಂಬುದು ಅಮೂರ್ತವಾದುದಲ್ಲ, ಸಾಮಾಜಿಕ ವ್ಯವಸ್ಥೆಯಲ್ಲಿ ಅದು ಬೇರೂರಿರಬೇಕು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.