ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು | ಮಳೆಗೆ ಕುಸಿದ ಮನೆ: ತಾಯಿ, ಮೂರು ಮಕ್ಕಳು ಸಾವು

Published 3 ಮಾರ್ಚ್ 2024, 6:20 IST
Last Updated 3 ಮಾರ್ಚ್ 2024, 6:20 IST
ಅಕ್ಷರ ಗಾತ್ರ

ಜಮ್ಮು: ಕಳೆದೆರಡು ದಿನದಿಂದ ಜಮ್ಮು–ಕಾಶ್ಮೀರದಲ್ಲಿ ಭಾರಿ ಮಳೆಯಾಗುತ್ತಿದ್ದು, ರಿಯಾಸಿ ಜಿಲ್ಲೆಯಲ್ಲಿ ಗುಡಿಸಲೊಂದು ಕುಸಿದು ಬಿದ್ದ ಪರಿಣಾಮ ಮಹಿಳೆ ಮತ್ತು ಆಕೆಯ ಮೂವರು ಹೆಣ್ಣು ಮಕ್ಕಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಯಿ ಫಲ್ಲಾ ಅಖ್ತರ್ (30), ಆಕೆಯ ಮಕ್ಕಳಾದ ನಸೀಮಾ (5), ಸಫೀನಾ ಕೌಸರ್ (3) ಮತ್ತು ಸಮ್ರೀನ್ ಕೌಸರ್ (2) ಮೃತಪಟ್ಟ ದುರ್ದೈವಿಗಳು. ಘಟನೆಯಲ್ಲಿ ಕುಟುಂಬದ ಇಬ್ಬರು ಹಿರಿಯ ಸದಸ್ಯರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಜಮ್ಮುವಿನ ಹಲವು ಭಾಗಗಳಲ್ಲಿ ಮಳೆ ಸುರಿಯುತ್ತಿದ್ದು, ಬಲವಾದ ಗಾಳಿ ಮತ್ತು ಆಲಿಕಲ್ಲು ಮಳೆಯಿಂದ ಹಲವು ಕಟ್ಟಡಗಳಿಗೆ ಹಾನಿಯಾಗಿದೆ. ಚಸ್ಸಾನ ಗ್ರಾಮದಲ್ಲಿ ಸುರಿದ ಮಳೆಗೆ ಗುಡಿಸಲು ಕುಸಿದಿದ್ದು, ದುರಂತ ಸಂಭವಿಸಿದೆ ಎಂದರು.

ಕಟ್ಟಡದ ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT