ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಕಾರಿನ ಮೇಲೆ ಬಿದ್ದ ಜಾಹೀರಾತು ಫಲಕ; ತಾಯಿ–ಮಗಳು ಸಾವು

Published 6 ಜೂನ್ 2023, 5:37 IST
Last Updated 6 ಜೂನ್ 2023, 5:37 IST
ಅಕ್ಷರ ಗಾತ್ರ

ಲಖನೌ: ಜಾಹೀರಾತು ಫಲಕವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಕಾರಿನೊಳಗಿದ್ದ ತಾಯಿ–ಮಗಳು ಸ್ಥಳದಲ್ಲೇ ಸಾವಗೀಡಾದ ಘಟನೆ ಉತ್ತರ ಪ್ರದೇಶದ ಲಖನೌದ ಅಟಲ್‌ ಬಿಹಾರಿ ವಾಜಪೇಯಿ ಕ್ರೀಡಾಂಗಣದ(ಏಕನಾ ಕ್ರೀಡಾಂಗಣ) ಬಳಿ ಸೋಮವಾರ ಸಂಜೆ ನಡೆದಿದೆ.

ಇಂದಿರಾನಗರ ಕಾಲೋನಿಯ ನಿವಾಸಿಯಾದ ಪ್ರೀತಿ ಜಗ್ಗಿ (38) ಮತ್ತು ಅವರ ಮಗಳು ಏಂಜಲ್‌(15) ಘಟನೆಯಲ್ಲಿ ಮೃತಪಟ್ಟಿದ್ದಾರೆ. ಕಾರು ಚಾಲಕ ಸರ್ತಾಜ್‌ ತೀವ್ರವಾಗಿ ಗಾಯಗೊಂಡಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗೋಸೈಗಂಜ್ ಸಹಾಯಕ ಪೊಲೀಸ್ ಆಯುಕ್ತ ಅಮಿತ್ ಕುಮಾಯತ್ ತಿಳಿಸಿದ್ದಾರೆ.

ಸಿಂಗಲ್‌ ಪೇರೆಂಟ್‌ ಆಗಿರುವ ಪ್ರೀತಿ ಜಗ್ಗಿ ಖಾಸಗಿ ಕಂಪೆನಿಯೊಂದರಲ್ಲಿ ಸಾಫ್ಟ್‌ವೇರ್‌ ಡೆವಲಪರ್‌ ಆಗಿದ್ದರು. ಮಗಳು ಏಂಜಲ್‌ 8ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ತಾಯಿ ಮಗಳಿಬ್ಬರು ಮಾಲ್‌ಗೆ ಹೊರಟಿರುವ ದಾರಿಯಲ್ಲಿ ದುರ್ಘಟನೆ ನಡೆದಿದೆ. ಈ ವೇಳೆ ಜೋರಾದ ಗಾಳಿ ಬೀಸುತ್ತಿದ್ದು, ಗಾಳಿಯ ಒತ್ತಡಕ್ಕೆ ಜಾಹೀರಾತು ಫಲಕವು ಇವರಿದ್ದ ಕಾರಿನ ಮೇಲೆ ಬಿದ್ದಿದೆ. ಫಲಕ ಬಿದ್ದ ರಭಸಕ್ಕೆ ಕಾರು ಅಪ್ಪಚ್ಚಿಯಾಗಿದೆ. ತಕ್ಷಣ ಮೂವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ದಾರಿಯ ಮಧ್ಯೆದಲ್ಲಿಯೇ ತಾಯಿ ಮಗಳಿಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಹೇಳಿದರು.

‘ಒರಂಗಿಸ್ ಅಡ್ವರ್ಟೈಸಿಂಗ್ಸ್ ಕಂಪೆನಿ ಜಾಹೀರಾತು ಫಲಕವನ್ನು ಅಳವಡಿಸಿದ್ದು, ಅದರ ನಿರ್ವಹಣೆಯ ಜವಾಬ್ದಾರಿ ಅದೇ ಕಂಪೆನಿಗೆ ಸೇರಿದೆ‘ ಎಂದು ಎಕಾನಾ ಸ್ಪೋರ್ಟ್ಸ್‌ ಸಿಟಿಯ ವ್ಯವಸ್ಥಾಪಕ ನಿರ್ದೇಶಕ ಉದಯ್ ಸಿನ್ಹಾ ಹೇಳಿದ್ದಾರೆ.

ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT