ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲ್ಕತ್ತ | ವೈದ್ಯೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿ 14 ದಿನ ಪೊಲೀಸ್‌ ಕಸ್ಟಡಿಗೆ

Published 10 ಆಗಸ್ಟ್ 2024, 14:12 IST
Last Updated 10 ಆಗಸ್ಟ್ 2024, 14:12 IST
ಅಕ್ಷರ ಗಾತ್ರ

ಕೋಲ್ಕತ್ತ: ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಬಂಧಿತ ಆರೋಪಿಯನ್ನು 14 ದಿನಗಳವರೆಗೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ.

ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಅತ್ಯಾಚಾರ) ಮತ್ತು 103ರ (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸೀಲ್ದಾ ನ್ಯಾಯಾಲಯದ ಎದುರು ಆರೋಪಿಯನ್ನು ಹಾಜರುಪಡಿಸಲಾಯಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ 14 ದಿನಗಳವರೆಗೆ ಪೊಲೀಸ್ ವಶಕ್ಕೆ ನೀಡುವಂತೆ ಪ್ರಾಸಿಕ್ಯೂಷನ್ ಮನವಿಯನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ.

ಕೋಲ್ಕತ್ತದ ಸರ್ಕಾರಿ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಶುಕ್ರವಾರ ವೈದ್ಯೆಯ ಶವ ಅರೆ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ವೈದ್ಯೆಗೆ ಲೈಂಗಿಕ ಕಿರುಕುಳ ನೋಡಿ ಹತ್ಯೆ ಮಾಡಲಾಗಿದೆ ಎಂದು ಮರಣೋತ್ತರ ವರದಿಯಲ್ಲಿ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಸರ್ಕಾರದ ವತಿಯಿಂದ ನ್ಯಾಯಾಲಯಕ್ಕೆ ಮನವಿ ಮಾಡಲಾಗುವುದು’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT