ನವದೆಹಲಿ: ಸೆಂಟ್ರಲ್ ದೆಹಲಿಯ ಐಟಿಒ ಪ್ರದೇಶದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರದಲ್ಲಿ ಭಾಗಿಯಾದ ಆರೋಪದ ಮೇಲೆ ಆಟೋರಿಕ್ಷಾ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

27 ವರ್ಷದ ಮಹಿಳೆ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ, ಈಶಾನ್ಯ ದೆಹಲಿಯ ಖಜೂರಿ ಖಾಸ್ ಪ್ರದೇಶದಿಂದ ಶನಿವಾರ ಬೆಳಿಗ್ಗೆ ಕಾಶ್ಮೀರಿ ಗೇಟ್‌ಗೆ ತೆರಳಲು ಆಟೋವನ್ನು ಹತ್ತಿದಾಗ ಆಟೋರಿಕ್ಷಾ ಚಾಲಕ ಮತ್ತು ಇತರ ಮೂವರು ಐಟಿಒ ಬಳಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಂತರ ತನ್ನನ್ನು ಕಾಶ್ಮೀರ ಗೇಟ್‌ನಲ್ಲಿ ಇಳಿಸಿದ್ದಾಗಿ ತಿಳಿಸಿದ್ದಾರೆ.

ಸಂತ್ರಸ್ತೆಯು ಉತ್ತರ ಪ್ರದೇಶದ ಸಂಭಾಲ್ ಮೂಲದವರಾಗಿದ್ದು, ಕೆಲಸದ ಮೇರೆಗೆ ದೆಹಲಿಗೆ ಬಂದಿದ್ದರು ಎನ್ನಲಾಗಿದೆ.

ತನ್ನನ್ನು ಐಟಿಒ-ಯಮುನಾ ಸೇತುವೆ ಬಳಿಯ ಕೋಣೆಯೊಂದಕ್ಕೆ ಕರೆದೊಯ್ದು ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ದೂರು ನೀಡಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಚಾರಣೆ ವೇಳೆ, ಆಟೋರಿಕ್ಷಾ ಚಾಲಕನು ತನ್ನ ಸ್ನೇಹಿತನೊಬ್ಬನಿಗೆ ಮಾತ್ರ ಕರೆ ಮಾಡಿರುವುದಾಗಿ ಹೇಳಿದ್ದು, ಅಲ್ಲಿ ಇನ್ನಿಬ್ಬರು ಪುರುಷರಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ಮಹಿಳೆಯ ದೂರಿನ ಆಧಾರದ ಮೇಲೆ ಐಪಿ ಎಸ್ಟೇಟ್ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರದ ಪ್ರಕರಣ ದಾಖಲಿಸಲಾಗಿದೆ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

ಸದ್ಯ ಮಹಿಳೆಯ ಆರೋಗ್ಯ ಸ್ಥಿರವಾಗಿದ್ದು, ತಲೆಮರೆಸಿಕೊಂಡಿರುವ ಇತರೆ ಆರೋಪಿಗಳನ್ನು ಬಂಧಿಸಲು ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.