ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ | ಪುತ್ರಿ ಎದುರೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

Published 25 ಏಪ್ರಿಲ್ 2024, 14:44 IST
Last Updated 25 ಏಪ್ರಿಲ್ 2024, 14:44 IST
ಅಕ್ಷರ ಗಾತ್ರ

ಜೈಪುರ: ಒಂದೂವರೆ ವರ್ಷದ ಮಗಳ ಎದುರೇ ಚಾಕು ತೋರಿಸಿ ಗುಂಪೊಂದು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ರಾಜಸ್ಥಾನದ ದುಂಗರ್ಪುರದಲ್ಲಿ ಗುರುವಾರ ನಡೆದಿದೆ.

ಅಪಾರ್ಟ್‌ಮೆಂಟ್‌ ಒಂದರ ಕಾವಲುಗಾರ ಕೋಣೆಯಲ್ಲಿ ಈ ಮಹಿಳೆ ತನ್ನ ಕುಟುಂಬದೊಂದಿಗೆ ಕಳೆದ 6 ವರ್ಷಗಳಿಂದ ವಾಸವಾಗಿದ್ದಾರೆ. ಬೈಕ್‌ನಲ್ಲಿ ಬಂದ ಇಬ್ಬರು, ಮನೆಯೊಳಗೆ ಬಲವಂತವಾಗಿ ನುಗ್ಗಿ, ಚಾಕು ತೋರಿಸಿ ಬೆದರಿಸಿದ್ದಾರೆ. ಮಗುವಿನ ಸಮ್ಮುಖದಲ್ಲೇ, ಮಹಿಳೆ ಮೇಲೆ ಅತ್ಯಾಚಾರವೆಸಗಿದ ಇಬ್ಬರು, ಚೀರಿದರೆ ಕೊಲೆ ಮಾಡುವುದಾಗಿ ತಾಯಿ ಮತ್ತು ಮಗುವಿಗೆ ಬೆದರಿಕೆ ಹಾಕಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡ ಠಾಣಾಧಿಕಾರಿ ಭಗವಾನ್ ಲಾಲ್ ಮೇಘವಾಲ್ ತಿಳಿಸಿದ್ದಾರೆ.

’ಘಟನೆ ಸಂದರ್ಭದಲ್ಲಿ ಮಹಿಳೆಯ ಪತಿ ಮನೆಯಲ್ಲಿರಲಿಲ್ಲ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT