ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯುಪಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೊ ವೈರಲ್ ಮಾಡಿದ ಆರೋಪಿಗಳು

Last Updated 1 ಮೇ 2022, 8:34 IST
ಅಕ್ಷರ ಗಾತ್ರ

ಶಾಹಜಹಾನ್‌ಪುರ (ಉತ್ತರ ಪ್ರದೇಶ): 30 ವರ್ಷದ ಮಹಿಳೆ ಮೇಲೆ ಐವರು ಅತ್ಯಾಚಾರವೆಸಗಿದ್ದು, ಕೃತ್ಯವನ್ನು ರೆಕಾರ್ಡ್ ಮಾಡಿ ವಿಡಿಯೊವನ್ನು ವೈರಲ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಏ. 22 ರಂದು ಐವರು ತನ್ನ ಮನೆಯ ಹೊರಗಿನ ಗುಡಿಸಲಿಗೆ ಎಳೆದೊಯ್ದು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಮದನಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ ನಿವಾಸಿಯಾಗಿರುವ ಮಹಿಳೆ ನೀಡಿರುವ ದೂರಿನ ಆಧಾರದ ಮೇಲೆ ಶನಿವಾರ ಎಫ್‌ಐಆರ್ ದಾಖಲಿಸಲಾಗಿದೆ. ಸದ್ಯ ತನಿಖೆ ನಡೆಯುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ (ನಗರ) ಸಂಜಯ್ ಕುಮಾರ್ ತಿಳಿಸಿದ್ದಾರೆ.

ಆರೋಪಿಗಳು, ಕೃತ್ಯವನ್ನು ಚಿತ್ರೀಕರಿಸಿದ್ದಾರೆ ಮತ್ತು ಘಟನೆಯ ಒಂದು ವಾರದ ನಂತರ ವಿಡಿಯೊವನ್ನು ವೈರಲ್ ಮಾಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಎಎಸ್‌ಪಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT