ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಅಕ್ರಮ ವರ್ಗಾವಣೆ: ಮಹಿಳಾ ಐಎಎಸ್‌ ಅಧಿಕಾರಿ ರಾನು ಸಾಹು ಬಂಧನ

Published 22 ಜುಲೈ 2023, 14:29 IST
Last Updated 22 ಜುಲೈ 2023, 14:29 IST
ಅಕ್ಷರ ಗಾತ್ರ

ರಾಯ್‌ಪುರ: ಛತ್ತೀಸ್‌ಗಢದಲ್ಲಿ ಕಲ್ಲಿದ್ದಲು ತೆರಿಗೆ ಹಗರಣಕ್ಕೆ ಸಂಬಂಧಿಸಿದಂತೆ ಮಹಿಳಾ ಐಎಎಸ್‌ ಅಧಿಕಾರಿ ರಾನು ಸಾಹು ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಶನಿವಾರ ಬಂಧಿಸಿದೆ. 

ಕಲ್ಲಿದ್ದಲು ತೆರಿಗೆ ಹಗರಣದಲ್ಲಿನ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾನು ಸಾಹು ಅವರನ್ನು ಬಂಧಿಸಲಾಗಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮೂರು ದಿನಗಳ ಇ.ಡಿ ವಶಕ್ಕೆ ನೀಡಲಾಗಿದೆ. ಇವರು, ಈ ಪ್ರಕರಣದಲ್ಲಿ ಬಂಧನಕ್ಕೊಳಗಾದ ರಾಜ್ಯದ ಎರಡನೇ ಐಎಎಸ್ ಅಧಿಕಾರಿ.

ಸಾಹು ಅವರು ಛತ್ತೀಸ್‌ಗಢ ರಾಜ್ಯ ಕೃಷಿ ಇಲಾಖೆ ನಿರ್ದೇಶಕಿಯಾಗಿ ಸದ್ಯ ಕೆಲಸ ಮಾಡುತ್ತಿದ್ದರು.

ಇ.ಡಿ ಅಧಿಕಾರಿಗಳು ನಿನ್ನೆ ಸಾಹು ಅವರ ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಅವರ ಬಳಿ ₹5.52 ಕೋಟಿ ಸ್ಥಿರಾಸ್ತಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಸಾಹು ಅವರು ರಾಯಗಢ ಮತ್ತು ಕೊರ್ಬಾ ಜಿಲ್ಲೆಗಳ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹಣ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT