ಮೃತರನ್ನು 55 ವರ್ಷದ ಕಮಲಾ ಕನ್ವರ್ ಎಂದು ಗುರುತಿಸಲಾಗಿದೆ.
ಮಹಿಳೆಯು ತನ್ನ ಮನೆಯ ಬಳಿ ಜಾನುವಾರುಗಳಿಗೆ ಮೇವು ಹಾಕುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ. ಆಕೆಯ ಕೂಗು ಕೇಳಿದ ಕುಟುಂಬಸ್ಥರು ಆಕೆಯನ್ನು ರಕ್ಷಿಸಲು ಧಾವಿಸಿದಾದರೂ ಅಷ್ಟರ ವೇಳೆಗೆ ಆಕೆ ಮೃತಪಟ್ಟಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ಘಟನಾ ಸ್ಥಳದಲ್ಲಿ ಅರಣ್ಯ ಇಲಾಖೆ, ಪೊಲೀಸ್ ಮತ್ತು ಸೇನಾ ತಂಡಗಳು ಚಿರತೆಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.