ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮದುವೆಗೆ ನಿರಾಕರಿಸಿದ ಬಾಯ್‌ಫ್ರೆಂಡ್ ಮರ್ಮಾಂಗಕ್ಕೆ ಚಾಕುವಿನಿಂದ ಇರಿದ ಮಹಿಳೆ!

Published 20 ಆಗಸ್ಟ್ 2024, 14:40 IST
Last Updated 20 ಆಗಸ್ಟ್ 2024, 14:40 IST
ಅಕ್ಷರ ಗಾತ್ರ

ಥಾಣೆ:‌‌ ಮದುವೆಗೆ ನಿರಾಕರಿಸಿದ ಬಾಯ್‌ಫ್ರೆಂಡ್‌ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ 26 ವರ್ಷದ ಮಹಿಳೆ, ಆತನ ಮರ್ಮಾಂಗವನ್ನು ಗಾಯಗೊಳಿಸಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ಧಾರೆ.

ಭಿವಂಡಿಯಲ್ಲಿ ಆಗಸ್ಟ್ 16ರಂದು ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪದ್ಮ ನಗರದಲ್ಲಿರುವ ತನ್ನ ನಿವಾಸದಲ್ಲಿ ಮಹಿಳೆಯು 31 ವರ್ಷದ ಬಾಯ್‌ಫ್ರೆಂಡ್ ಮೇಲೆ ತರಕಾರಿ ಕತ್ತರಿಸುವ ಚಾಕುವಿನಿಂದ ದಾಳಿ ಮಾಡಿದ್ದಾಳೆ. ಮದುವೆ ಮಾಡಿಕೊಳ್ಳಲು ನಿರಾಕರಿಸಿದ ಬಾಯ್‌ಫ್ರೆಂಡ್ ಮರ್ಮಾಂಗಕ್ಕೆ ಚಾಕುವಿನಿಂದ ಇರಿದಿರುವ ಮಹಿಳೆ ಗಂಭೀರವಾಗಿ ಗಾಯಗೊಳಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೂಡಲೇ ಮನೆಯಿಂದ ಓಡಿ ಬಂದ ಬಾಯ್‌ಫ್ರೆಂಡ್ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಚಿಕಿತ್ಸೆ ಬಳಿಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ದೂರಿನ ಅನ್ವಯ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 118(1)(ಸ್ವಯಂಪ್ರೇರಣೆಯಿಂದ ಅಪಾಯಕಾರಿ ಆಯುಧದಿಂದ ಗಂಭೀರವಾದ ಗಾಯವನ್ನು ಉಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವರೆಗೆ ಆಪಾದಿತ ಮಹಿಳೆಯ ಬಂಧನವಾಗಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT