ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. ಸಂತ್ರಸ್ತೆಯು ತನ್ನ ಸ್ನೇಹಿತನೊಂದಿಗೆ ರೀಲ್ಸ್ ವಿಡಿಯೊ ಮಾಡಲು ತೆರಳಿದ್ದ ವೇಳೆ ಇಬ್ಬರು ವ್ಯಕ್ತಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಲ್ಹಾರಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಶಿವಕುಮಾರ್ ರಘುವಂಶಿ ಮಾಹಿತಿ ನೀಡಿದ್ದಾರೆ.
ಈ ಕೃತ್ಯದಲ್ಲಿ ಭಾಗಿಯಾಗಿರುವ ಇಬ್ಬರು ಆರೋಪಿಗಳು ಯುವತಿಯ ಸ್ನೇಹಿತನಿಗೆ ಪರಿಚಿತರು ಎಂದು ತಿಳಿದು ಬಂದಿದೆ ಎಂದು ರಘುವಂಶಿ ಹೇಳಿದ್ದಾರೆ.