ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಡೋದರಾ: ಮಹಿಳಾ ಪೊಲೀಸ್ ಪೇದೆ ನಾಪತ್ತೆ

Last Updated 18 ಜನವರಿ 2023, 13:23 IST
ಅಕ್ಷರ ಗಾತ್ರ

ವಡೋದರಾ(ಗುಜರಾತ್): ವಡೋದರಾದಲ್ಲಿ ಮಹಿಳಾ ಪೊಲೀಸ್ ಪೇದೆಯೊಬ್ಬರು ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತೆಯ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಪೇದೆ ಮಣಿಬೆನ್ ಚೌಧರಿ(24), ಅವರ ಪೋಷಕರು ತಮ್ಮ ಮಗಳು ಮನೆಗೆ ಹಿಂತಿರುಗಿಲ್ಲ. ಸೋಮವಾರ ಸಂಜೆಯಿಂದ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಆದರೆ ಸಂತ್ರಸ್ತೆ ಎಂಟು ದಿನಗಳ ರಜೆ ಅನುಮತಿ ಪಡೆದು, ದಭೋಯಿ ಪೊಲೀಸ್ ಠಾಣೆಯಿಂದ ಹೊರಟ್ಟಿದ್ದಾರೆ.

ಶೀಘ್ರದಲ್ಲೇ ಕಾಣೆಯಾದ ಮಣಿಬೆನ್ ಚೌಧರಿ ಪತ್ತೆಗೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಪೋಲಿಸ್ ಅಧಿಕಾರಿ ತಿಳಿಸಿದ್ದಾರೆ.

ಕಾಣೆಯಾದ ಸಂತ್ರಸ್ತೆ ಮುಸ್ಲಿಂ ಯುವಕನೊಂದಿಗೆ ಸ್ನೇಹವನ್ನು ಹೊಂದಿದ್ದು, ಆತನೊಂದಿಗೆ ಪರಾರಿಯಾಗಿರುವ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ಯುವಕ ಮದುವೆಯಾಗಿದ್ದಾನೆ ಹೀಗಾಗಿ ಪೊಲೀಸರು ಆ ನಿಟ್ಟಿನಲ್ಲಿಯೂ ತನಿಖೆ ಪ್ರಾರಂಭಿಸಿದ್ದಾರೆ ಎಂದು ಐಎಎನ್ಎಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT