ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್‌ | ಅತ್ಯಾಚಾರ: ಹಿರಿಯ ಅಧಿಕಾರಿಗಳ ಕಾರು ಚಾಲಕರ ಬಂಧನ

Published 28 ಡಿಸೆಂಬರ್ 2023, 12:51 IST
Last Updated 28 ಡಿಸೆಂಬರ್ 2023, 12:51 IST
ಅಕ್ಷರ ಗಾತ್ರ

ಮೇದಿನಿನಗರ: ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ ಇಬ್ಬರು ಹಿರಿಯ ಅಧಿಕಾರಿಗಳ ಕಾರು ಚಾಲಕರು 32 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈ ಕೃತ್ಯವೆಸಗಿದ ಕಾರು ಚಾಲಕರಾದ ಧರ್ಮೇಂದ್ರ ಕುಮಾರ್ ಹಾಗೂ ಪ್ರಕಾಶ್ ಕುಮಾರ್ ಅವರನ್ನು ಬಂಧಿಸಲಾಗಿದೆ. ಈ ಇಬ್ಬರು ಆರೋಪಿಗಳು ಮತ್ತು ಮಹಿಳೆಯನ್ನು ವೈದ್ಯಕೀಯ ತಪಾಸಣೆಗಾಗಿ ಮೇದಿನಿರಾಯ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 

ಗುರುವಾರ ಬೆಳಿಗ್ಗೆ ಮಹಿಳೆಯು ಚಿಕಿತ್ಸೆಗೆಂದು ಮೇದಿನಿನಗರಕ್ಕೆ ತೆರಳಲು ಡಾಲ್ಟೊಗಂಜ್ ರೈಲು ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಇಬ್ಬರು ಆರೋಪಿಗಳು ತನ್ನನ್ನು ನಂಬಿಸಿ, ರೈಲು ನಿಲ್ದಾಣದ ಬಳಿ ಇರುವ ಕೊಠಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಈ ಇಬ್ಬರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT