ಫರಿದಾಬಾದ್: ಚಲಿಸುತ್ತಿದ್ದ ಕಾರಿನಲ್ಲಿ 25 ವರ್ಷದ ವಿವಾಹಿತ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ನಂತರ ಅವರನ್ನು ಕಾರಿನಿಂದ ಹೊರ ತಳ್ಳಿದ ಘಟನೆ ಫರಿದಾಬಾದ್ನಲ್ಲಿ ಜರುಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಅವರು ಆರೋಪವನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ವೈವಾಹಿಕ ಜೀವನದಲ್ಲಿನ ತೊಂದರೆಯಿಂದಾಗಿ ಪೋಷಕರ ಮನೆಯಲ್ಲಿದ್ದ ಸಂತ್ರಸ್ತೆಯು, ಸೋಮವಾರ ಸಂಜೆ ಸೆಕ್ಟರ್ 23ರಲ್ಲಿದ್ದ ಸ್ನೇಹಿತೆಯ ಮನೆಯಿಂದ ವಾಪಸ್, ಮನೆಗೆ ತೆರಳಲು ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವೇಳೆ ಕಾರಿನಲ್ಲಿ ಬಂದ ಇಬ್ಬರು ಅಪರಿಚಿತರು, ಅವರನ್ನು ಮನೆಗೆ ಬಿಡುತ್ತೇವೆ ಎಂದು ನಂಬಿಸಿ, ಗುರುಗ್ರಾಮ ಕಡೆಗೆ ವಾಹನ ಚಲಾಯಿಸಿದ್ದಾರೆ. ವಾಹನದಲ್ಲೇ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿ, ನಂತರ ಕಾರಿನಿಂದ ಹೊರದಬ್ಬಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಹಿಳೆ ಮೇಲೆ ಮಂಗಳವಾರ ಮುಂಜಾನೆ 3 ಗಂಟೆಯ ತನಕ ಕಾರಿನಲ್ಲಿ ಅತ್ಯಾಚಾರ ಎಸಗಿದ ಆರೋಪಿಗಳು, ನಂತರ 90 ಕಿ.ಮೀ ವೇಗದಲ್ಲಿ ಹೋಗುತ್ತಿದ್ದ ಕಾರಿನಿಂದ ಅವರನ್ನು ರಾಜಾ ಚೌಕಾ ಬಳಿ ಹೊರಗೆಸೆದಿದ್ದಾರೆ ಎಂದು ತಿಳಿಸಿದ್ದಾರೆ.

ಘಟನೆಯಿಂದ ಮಹಿಳೆಯು ಗಂಭೀರ ಗಾಯಗೊಂಡಿದ್ದಾರೆ. ಅವರ ಮುಖ, ತಲೆಗೆ 12 ಹೊಲಿಗೆಗಳನ್ನು ಹಾಕಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.

ಸಂತ್ರಸ್ತೆಯ ಸಹೋದರಿ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಂತ್ರಸ್ತೆಯು ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.