ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ | ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಆರೋ‍ಪಿ ಬಂಧನ

Published 11 ಡಿಸೆಂಬರ್ 2023, 11:10 IST
Last Updated 11 ಡಿಸೆಂಬರ್ 2023, 11:10 IST
ಅಕ್ಷರ ಗಾತ್ರ

ಸತ್ನಾ: ಮಧ್ಯಪ್ರದೇಶದ ಕತ್ನಿ ಜಿಲ್ಲೆಯಲ್ಲಿ ಚಲಿಸುತ್ತಿದ್ದ ರೈಲೊಂದರಲ್ಲಿ 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್‌ನ (ಜಿಆರ್‌ಪಿ) ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಜಬಲ್ಪುರ–ರೆವಾ ಮೆಮು ರೈಲಿನಲ್ಲಿ ಘಟನೆ ನಡೆದಿದ್ದು, ಸಂತ್ರಸ್ತೆಯು ಸತ್ರಾ ಹಾಗೂ ಕತ್ನಿ ನಡುವಿನ ಪಕಾರಿಯ ನಿಲ್ದಾಣದಲ್ಲಿ ರೈಲು ಹತ್ತಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ಉತ್ತರ ಪ್ರದೇಶದ ಬಂದಾ ನಿವಾಸಿ, ಕತ್ನಿಯಲ್ಲಿ ವಾಸವಾಗಿರುವ ಪಂಕಜ್‌ ಕುಶ್ವಾಹ (23) ಎಂಬಾತನನ್ನು ಬಂಧಿಸಲಾಗಿದೆ ಎಂದು ಸತ್ನಾ ಸರ್ಕಾರಿ ರೈಲ್ವೆ ಪೊಲೀಸ್‌ನ ನಿಲ್ದಾಣ ಉಸ್ತುವಾರಿ ಎಲ್.ಪಿ ಕಶ್ಯಪ್ ತಿಳಿಸಿದ್ದಾರೆ.

ಆರೋಪಿಯು ಶೌಚಾಲಯದ ಸಮೀಪ ಸಂತ್ರಸ್ತೆಯನ್ನು ತಡೆದು, ಅತ್ಯಾಚಾರ ಎಸಗಿದ್ದ. ಅಲ್ಲಿಂದ ತಪ್ಪಿಸಿಕೊಂಡ ಸಂತ್ರಸ್ತೆ, ಸತ್ನಾ ನಿಲ್ದಾಣದ ಜಿಆರ್‌ಪಿ ಅಧಿಕಾರಿಗೆ ದೂರು ನೀಡಿದ್ದರು. ಬಳಿಕ ಆರೋಪಿಯನ್ನು ಬಂಧಿಸಲು ತಂಡ ರಚಿಸಿ, ಕಾರ್ಯಾಚರಣೆ ನಡೆಸಲಾಗಿತ್ತು.

ಶೌಚಾಲಯದೊಳಗೆ ಚಿಲಕ ಹಾಕಿಕೊಂಡು ಅವಿತಿದ್ದ ಅರೋಪಿಯನ್ನು, ರೆವಾ ನಿಲ್ದಾಣದಲ್ಲಿ ಬಾಗಿಲು ಮುರಿದು ಪೊಲೀಸರು ಬಂಧಿಸಿದ್ದಾರೆ. ಕತ್ನಿ ಜಿಆರ್‌ಪಿ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದರಿಂದ ಪ್ರಕರಣವನ್ನು ಅಲ್ಲಿಗೆ ವರ್ಗಾಯಿಸಲಾಗಿದೆ ಎಂದು ಆಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರೋಪಿಯ ಕ್ರಿಮಿನಲ್ ಹಿನ್ನಲೆಗಳನ್ನು ಪರಿಶೀಲನೆ ಮಾಡಲಾಗುವುದು ಎಂದು ಡಿಎಸ್‌ಪಿ ಸಾರಿಕಾ ಪಾಂಡೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT