ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಸ್ಟ್ ಗೀಳು | ವಿಡಿಯೊ ಚಿತ್ರೀಕರಿಸುತ್ತಿದ್ದ ಯುವತಿ ರೈಲಿಗೆ ಸಿಲುಕಿ ಸಾವು!

Published 2 ಮೇ 2024, 11:06 IST
Last Updated 2 ಮೇ 2024, 11:06 IST
ಅಕ್ಷರ ಗಾತ್ರ

ಹರಿದ್ವಾರ: ರೈಲು ಹಳಿಯ ಮೇಲೆ ವಿಡಿಯೊ ಚಿತ್ರೀಕರಿಸುತ್ತಿದ್ದ 20 ವರ್ಷದ ಯುವತಿಯೊಬ್ಬರು ರೈಲಿಗೆ ಸಿಲುಕಿ, ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ರೂರ್ಕಿಯಲ್ಲಿ ನಡೆದಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.

ಮೃತ ಯುವತಿ ವೈಶಾಲಿಯನ್ನು ಹರಿದ್ವಾರ ಜಿಲ್ಲೆಯ ಹರಿಪುರದವರು ಎಂದು ಗುರುತಿಸಲಾಗಿದೆ.

ಈ ಘಟನೆ ಬುಧವಾರ ಸಂಜೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇಲ್ಲಿನ ರಹೀಂಪುರ ರೈಲ್ವೆ ಗೇಟ್‌ ಬಳಿ ಸ್ನೇಹಿತೆಯೊಂದಿಗೆ ನಿಂತಿದ್ದ ವೈಶಾಲಿ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಪೋಸ್ಟ್‌ ಮಾಡುವ ಸಲುವಾಗಿ ರೈಲು ಹಳಿಗಳ ಮೇಲೆ ವಿಡಿಯೊ ಚಿತ್ರೀಕರಿಸುತ್ತಿದ್ದರು. ಈ ವೇಳೆ ರೈಲಿಗೆ ಸಿಲುಕಿ ಯುವತಿ ಮೃತಪಟ್ಟಿದ್ದಾರೆ.

ಘಟನೆ ಬಳಿಕ ಸ್ನೇಹಿತೆ, ವೈಶಾಲಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಬಳಿಕ ಕುಟುಂಬಸ್ಥರು ಪೊಲೀಸರಿಗೆ ವಿಷಯ ತಿಳಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT