ಮುಂಬೈ: 10ನೇ ತರಗತಿ ವಿದ್ಯಾರ್ಥಿಯೊಬ್ಬನ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮುಂಬೈನ ಪ್ರತಿಷ್ಠಿತ ಶಾಲೆಯೊಂದರ ಇಂಗ್ಲಿಷ್ ಭಾಷಾ ಶಿಕ್ಷಕಿಯನ್ನು (40) ಪೊಲೀಸರು ಬಂಧಿಸಿದ್ದಾರೆ.

ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿಯು 2023ರಲ್ಲಿ ಶಾಲಾ ವಾರ್ಷಿಕೋತ್ಸವದ ಸಂದರ್ಭದಲ್ಲಿ ಆರೋಪಿ ಶಿಕ್ಷಕಿಯತ್ತ ಆಕರ್ಷಿತನಾಗಿದ್ದ. ಈ ಅವಕಾಶ ಬಳಸಿಕೊಂಡ ಶಿಕ್ಷಕಿಯು ಹಲವು ಬಾರಿ ವಿದ್ಯಾರ್ಥಿಯನ್ನು ದುಬಾರಿ ಹೋಟೆಲ್ಗಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದರು. ಆತಂಕಕ್ಕೆ ಒಳಗಾಗಿದ್ದ ವಿದ್ಯಾರ್ಥಿಗೆ ಮದ್ಯಪಾನ ಮಾಡಿಸಿ, ಆತಂಕ ನಿವಾರಕ ಮಾತ್ರೆಗಳನ್ನು ನೀಡಿ ಕೃತ್ಯಕ್ಕೆ ಬಳಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿಯು ಖಿನ್ನತೆಗೆ ಒಳಗಾಗಿದ್ದ. ಪೋಷಕರು ವಿದ್ಯಾರ್ಥಿಯ ವರ್ತನೆಯಲ್ಲಿ ಆಗಿರುವ ಬದಲಾವಣೆ ಗಮನಿಸಿದ್ದರು. ಆದರೆ, 10ನೇ ತರಗತಿ ಪರೀಕ್ಷೆ ಮುಗಿಯಲಿ ಎಂದು ಸಮ್ಮನಿದ್ದರು. ಪರೀಕ್ಷೆ ಮುಗಿದು ಶಾಲೆ ತೊರೆದ ಬಳಿಕವೂ ಶಿಕ್ಷಕಿಯು ವಿದ್ಯಾರ್ಥಿಯೊಂದಿಗೆ ಸಂಬಂಧ ಮುಂದುವರಿಸಲು ಪ್ರಯತ್ನಿಸಿದ್ದರು. ಪೋಷಕರು ಪ್ರಶ್ನಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹೇಳಿದ್ದಾರೆ.

ಶಿಕ್ಷಕಿಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಳ್ಳಲು ವಿದ್ಯಾರ್ಥಿಗೆ ಪ್ರೋತ್ಸಾಹ ನಿಡಿದ ಆರೋಪದಲ್ಲಿ, ಶಿಕ್ಷಕಿಯ ಸ್ನೇಹಿತೆಯ ವಿರುದ್ಧವೂ ಪ್ರಕರಣ ದಾಖಲಾಗಿದೆ. ಶಿಕ್ಷಕಿಯ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ, ಭಾರತೀಯ ನ್ಯಾಯ ಸಂಹಿತೆ ಮತ್ತು ಬಾಲ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.