ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ| ಜಮೀನು ವಿವಾದದಲ್ಲಿ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಥಳಿತ: 10 ಮಂದಿ ಬಂಧನ

Published 29 ಏಪ್ರಿಲ್ 2023, 12:47 IST
Last Updated 29 ಏಪ್ರಿಲ್ 2023, 12:47 IST
ಅಕ್ಷರ ಗಾತ್ರ

ಸಂಭಾಲ್(ಉತ್ತರ ಪ್ರದೇಶ) ಇಲ್ಲಿನ ಹಳ್ಳಿಯೊಂದರಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಈ ಸಂಬಂಧ ಇಬ್ಬರು ಮಹಿಳೆಯರೂ ಸೇರಿದಂತೆ ಹತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಸಯೋರಾಜ್, ಭುರೆ, ವಿರೋಜ್, ಶೆರ್ರಿ ಮತ್ತು ಮಂಜು ಎಂಬ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಚಕ್ರೇಶ್ ಮಿಶ್ರಾ ಮಾಹಿತಿ ನೀಡಿದ್ದಾರೆ.

ವಿಡಿಯೊದಲ್ಲಿ ಈ ಐದು ಮಂದಿ ವಿರ್ಕ್ವಾರಿ ಗ್ರಾಮದ ನಿವಾಸಿ ಸುನೀತಾ ಅವರನ್ನು ಅವರ ಏಳು ವರ್ಷದ ಮಗಳ ಮುಂದೆ ಥಳಿಸುತ್ತಿರುವುದು ಕಂಡು ಬಂದಿದೆ ಎಂದು ಮಿಶ್ರಾ ತಿಳಿಸಿದ್ದಾರೆ.

ಏಪ್ರಿಲ್ 26 ರಂದು ಈ ಸಂಬಂಧ ಮಹಿಳೆ ದೂರು ನೀಡಿದ್ದು, ರಜನೇಶ್, ರಾಜ್‌ಕುಮಾರ್, ರಾಜು, ರಿಷಿಪಾಲ್ ಸೇರಿದಂತೆ ಇಬ್ಬರು ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ನಂತರ ಎಫ್‌ಐಆರ್‌ನಲ್ಲಿ ಹೆಸರಿಸಲಾದ ಕೆಲವರನ್ನು ಹಾಗೂ ತೇಜ್ವತಿ ಎಂಬ ಮಹಿಳೆಯನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಡಿಯೊವನ್ನು ಅಂತರ್ಜಾಲದಲ್ಲಿ ಪೋಸ್ಟ್ ಮಾಡಿದ್ದನ್ನು ಗಮನಿಸಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದೇವೆ. ತನಿಖೆಯ ವೇಳೆ ಜಮೀನು ವಿವಾದ ಸಂಬಂಧಿಸಿದಂತೆ ನಡೆಯುತ್ತಿರುವುದು ಕಂಡುಬಂದಿದೆ ಎಂದು ಮಿಶ್ರಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT