ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಅಂಗಡಿ, ವಾಣಿಜ್ಯ ಸಂಸ್ಥೆಗಳಲ್ಲಿ ಮಹಿಳೆಯರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಸರ್ಕಾರ ಅನುಮೋದನೆ ನೀಡಿದೆ.

ಈ ಕುರಿತು ಪ್ರಕಟಿಸಿರುವ ಮುಖ್ಯಮಂತ್ರಿ ರೇಖಾ ಗುಪ್ತಾ, ಉದ್ಯೋಗದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಮತ್ತು ದೆಹಲಿಯನ್ನು ದಿನದ 24ಗಂಟೆಗಳ ಕಾಲ ಕಾರ್ಯನಿರ್ವಹಿಸುವ ವ್ಯಾಪಾರ ಕೇಂದ್ರವನ್ನಾಗಿ ಪರಿವರ್ತಿಸುವ ಗುರಿಯಿದೆ. ಇದೊಂದು ಐತಿಹಾಸಿಕ ನಿರ್ಧಾರವಾಗಿದ್ದು, ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಸ್ವಾವಲಂಬನೆಗೆ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ರಾತ್ರಿ ವೇಳೆ ಕೆಲಸ ಮಾಡುವ ಮಹಿಳೆಯರ ಸುರಕ್ಷತೆ ಮತ್ತು ಹಿತವನ್ನು ಕಾಪಾಡಲಾಗುವುದು ಎಂದಿರುವ ಗುಪ್ತಾ, ಮಹಿಳೆಯರ ಸುರಕ್ಷತೆಗಾಗಿ ಉದ್ಯೋಗ ನೀಡುವವರು, ಮಹಿಳಾ ಉದ್ಯೋಗಿಗಳಿಂದ ಲಿಖಿತ ಒಪ್ಪಿಗೆಯನ್ನು ಪಡೆಯಬೇಕು, ಸಾರಿಗೆ ವ್ಯವಸ್ಥೆಯನ್ನು ನೀಡಬೇಕು, ಸಿಸಿಟಿವಿ ಅಳವಡಿಕೆ, ಮಹಿಳಾ ಭದ್ರತಾ ಸಿಬ್ಬಂದಿಯ ನಿಯೋಜನೆ ಮತ್ತು ಮಹಿಳಾ ಉದ್ಯೋಗಿಗೆ ಅಗತ್ಯ ಮೂಲಭೂತ ಸೌಲಭ್ಯಗಳಾದ ಶೌಚಾಲಯ, ವಿಶ್ರಾಂತಿ ಕೊಠಡಿ, ಲಾಕರ್ಗಳನ್ನು ನೀಡಬೇಕು. ಬಹುಮುಖ್ಯವಾಗಿ ಸಂಸ್ಥೆಯಲ್ಲಿ ಲೈಂಗಿಕ ಕಿರುಕುಳ ತಡೆ (POSH) ಕಾಯ್ದೆಯಡಿಯಲ್ಲಿ ಕಡ್ಡಾಯವಾಗಿರುವ ಆಂತರಿಕ ದೂರು ಸಮಿತಿ ರಚನೆಯಾಗಬೇಕು ಎಂದು ಹೇಳಿದ್ದಾರೆ.

ಇದಲ್ಲದೆ ಕಡ್ಡಾಯವಾಗಿ ವೈದ್ಯಕೀಯ ಚಿಕಿತ್ಸೆ ಒದಗಿಸುವುದು, ಇಎಸ್ಐ, ಪಿಎಫ್, ಬೋನಸ್, ವಾರದ ರಜೆ, ಓವರ್ಟೈಮ್ ಕೆಲಸಕ್ಕೆ ಪಾವತಿಯಂತಹ ಸೌಲಭ್ಯವನ್ನು ಒದಗಿಸಬೇಕು ಎಂದು ಹೇಳಿಕೆ ತಿಳಿಸಿದೆ.

ದೆಹಲಿ ಅಂಗಡಿಗಳು ಮತ್ತು ಸ್ಥಾಪನೆ ಕಾಯ್ದೆ 1954ಕ್ಕೆ ತಿದ್ದುಪಡಿ ತರುವ ನಿರ್ಧಾರವನ್ನು ಇದು ಒಳಗೊಂಡಿದೆ ಎಂದು ಉಲ್ಲೇಖಿಸಲಾಗಿದ್ದು, ಈ ಕಾಯ್ದೆಯ ಪ್ರಕಾರ ಬೇಸಿಗೆಯಲ್ಲಿ ರಾತ್ರಿ 9 ರಿಂದ ಬೆಳಿಗ್ಗೆ 7 ರವರೆಗೆ ಮತ್ತು ಚಳಿಗಾಲದಲ್ಲಿ ರಾತ್ರಿ 8 ರಿಂದ ಬೆಳಿಗ್ಗೆ 8 ರವರೆಗೆ ಮಹಿಳೆಯರು ಕೆಲಸ ಮಾಡುವುದನ್ನು ನಿರ್ಬಂಧಿಸಲಾಗಿದೆ.

ಲೆಫ್ಟಿನೆಂಟ್ ಗವರ್ನರ್ ಅನುಮತಿ ನೀಡಿದ ನಂತರ, ಮಹಿಳೆಯರು ದಿನದ 24 ಗಂಟೆಯೂ ಉದ್ಯೋಗದಲ್ಲಿ ತೊಡಗಿಸಿಕೊಳ್ಳುವ ನೀತಿ ಜಾರಿಯಾಗಲಿದೆ.

ಈ ಮೂಲಕ ಮಹಿಳೆಯರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಅನುಮೋದಿಸಿರುವ ಹರಿಯಾಣ, ತೆಲಂಗಾಣ, ಮಧ್ಯಪ್ರದೇಶ, ತಮಿಳುನಾಡು ರಾಜ್ಯಗಳ ಪಟ್ಟಿಗೆ ದೆಹಲಿ ಕೂಡ ಸೇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.