ನವದೆಹಲಿ: ‘ಪ್ರಮುಖ ಯುದ್ಧನೌಕೆಗಳಿಗೆ ಮಹಿಳಾ ಅಧಿಕಾರಿಗಳನ್ನು ನೇಮಿಸಲಾಗುತ್ತಿದೆ’ ಎಂದು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್.ಹರಿಕುಮಾರ್ ಅವರು ಶುಕ್ರವಾರ ಹೇಳಿದರು.

‘ಇದುವರೆಗೂ 15 ಯುದ್ಧನೌಕೆಗಳಿಗೆ 28 ಅಧಿಕಾರಿಗಳನ್ನು ನೇಮಿಸಲಾಗಿದೆ. ಶೀಘ್ರದಲ್ಲಿಯೇ ಈ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ’ ಎಂದು ‘ನೌಕಾಪಡೆ ದಿನ’ದ ಮುನ್ನಾದಿನದಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿವಿಧ ಹಂತಗಳಲ್ಲಿ ಮಹಿಳಾ ಅಧಿಕಾರಿಗಳನ್ನು ನೇಮಿಸಲು ನೌಕಾಪಡೆಯು ಸಜ್ಜಾಗಿದೆ. ಮಹಿಳಾ ಸಬಲೀಕರಣ ಕುರಿತ ಕೇಂದ್ರ ಸರ್ಕಾರದ ಚಿಂತನೆಗೆ ಅನುಗುಣವಾಗಿ ನೌಕಾಪಡೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುತ್ತಿದೆ. ಬಹುತೇಕ ಎಲ್ಲ ಯುದ್ಧನೌಕೆಗಳಿಗೆ ಮಹಿಳೆಯರನ್ನು ನೇಮಿಸಲಾಗುತ್ತಿದೆ ಎಂದು ತಿಳಿಸಿದರು.

ನೌಕಾಪಡೆಯ ಪ್ರವೇಶ ಹಂತದಲ್ಲಿ ಮಹಿಳೆಯರಿಗೆ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ತರಬೇತಿ ನೀಡುವ ಕುರಿತು ರೂಪುರೇಷೆಯನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.