ಹೊನ್ನಾಳಿ: ‘ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಮೀಸಲಾತಿ ಕಲ್ಪಿಸುವ ಉದ್ದೇಶ ಹೊಂದಿದ್ದ ಮಸೂದೆಯನ್ನು ಸೋಲಿಸುವ ಮೂಲಕ ವಿರೋಧ ಪಕ್ಷಗಳು ನಮ್ಮ ಸಂವಿಧಾನಕ್ಕೆ ಹಾಗೂ ದೇಶದ ನಾರಿಶಕ್ತಿಗೆ ಅವಮಾನ ಮಾಡಿವೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದರು.

‘ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲುಂಟಾದ ಕೂಡಲೇ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳ ಮುಖಂಡರು ಚಪ್ಪಾಳೆ ತಟ್ಟಿ ಸಂಭ್ರಮಿಸಿದ್ದು ಬಿಜೆಪಿಗೆ ಮಾಡಿದ ಅವಮಾನ ಅಲ್ಲ. ಇದು ನಾರಿಶಕ್ತಿಗೆ ಮಾಡಿದ ಅಪಮಾನ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

‘ಮೀಸಲಾತಿ ಮಸೂದೆ ಪರ ಎಲ್ಲರೂ ಕೈಜೋಡಿಸಿದ್ದರೆ ಮಹಿಳೆಯರಿಗೆ ಪ್ರಾತಿನಿಧ್ಯ, ಸಮಾನ ಅವಕಾಶ ಸಿಗುತ್ತಿತ್ತು. ಆಗ ಲೋಕಸಭೆಯಲ್ಲಿ ಮಹಿಳೆಯರ ಧ್ವನಿ ಹೆಚ್ಚಾಗುತ್ತಿತ್ತು. ಆದರೀಗ ವಿಪಕ್ಷಗಳ ಧೋರಣೆಯಿಂದ ಮಹಿಳೆಯರ ಧ್ವನಿ ಅಡಗಿದೆ’ ಎಂದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅರಕೆರೆ ನಾಗರಾಜ್, ಮುಖಂಡರಾದ ಜೆ.ಕೆ. ಸುರೇಶ್, ಸಿ.ಆರ್. ಶಿವಾನಂದ್, ನೆಲಹೊನ್ನೆ ಮಂಜುನಾಥ್, ಎಸ್.ಎಸ್. ಬೀರಪ್ಪ, ಮಾರುತಿನಾಯ್ಕ, ಕರಿಬಸವ ರೆಡ್ಡಿ, ರಾಜುಗೌಡ, ಕೋಟೆಹಾಳ್ ಮಲ್ಲೇಶ್, ಹಿರೇಗೋಣಿಗೆರೆ ನರಸಿಂಹಪ್ಪ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-43-407772752

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.