ಕಾರವಾರ: ‘ಮಹಿಳೆಯರಿಗೆ ಶಾಸನಸಭೆಗಳಲ್ಲಿ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ನಾರಿಶಕ್ತಿ ವಂದನಾ ಮಸೂದೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ದೇಶದ ಕೋಟ್ಯಂತರ ಮಹಿಳೆಯರಿಗೆ ವಂಚನೆ ಎಸಗಿವೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಆರೋಪಿಸಿದರು.

‘ಮಹಿಳೆಯರಿಗೆ ರಾಜಕೀಯ ಶಕ್ತಿ ತುಂಬುವ ಮೂಲಕ ಸ್ವಾವಲಂಬನೆಗೆ ದೃಢ ಹೆಜ್ಜೆ ಇರಿಸಲು ವೇದಿಕೆ ಕಲ್ಪಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಧ್ಯೇಯೋದ್ದೇಶಕ್ಕೆ ಅಡ್ಡಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಮಹತ್ವದ ನಿರ್ಣಯ ಕೈಗೊಳ್ಳಲು ವಿರೋಧ ವ್ಯಕ್ತವಾಗಿದ್ದು ದೇಶದ ಎಲ್ಲ ಮಹಿಳೆಯರಿಗೆ ಬೇಸರದ ದಿನವಾಗಿದೆ’ ಎಂದು ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

‘ಲೋಕಸಭೆ ಕ್ಷೇತ್ರಗಳ ಪುನರ್ ವಿಂಗಡಣೆ ಮಸೂದೆಗೂ ಅಡ್ಡಿಪಡಿಸಲಾಗಿದೆ. ವಿರೋಧ ಪಕ್ಷಗಳ ಈ ನಡೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗುತ್ತಿದೆ’ ಎಂದರು.

‘ಮಹಿಳಾ ಮಸೂದೆಗೆ ವಿರೋಧಿಸಿದ ವಿರೋಧ ಪಕ್ಷದ ನಡೆಯ ವಿರುದ್ಧ ಹೋರಾಟ ನಡೆಸಲಾಗುವುದು. ಪ್ರತಿ ಮಹಿಳೆಯರಿಗೂ ಈ ಬಗ್ಗೆ ಮನವರಿಕೆ ಮಾಡಲಾಗುವುದು. ಮುಂಬರುವ ಚುನಾವಣೆಗಳಲ್ಲಿ ವಿಪಕ್ಷಗಳಿಗೆ ಸೋಲಿನ ರುಚಿ ತೋರಿಸಲಿದ್ದೇವೆ’ ಎಂದರು.

ಪ್ರಮುಖರಾದ ಸಂಜಯ ಸಾಳುಂಕೆ, ಸುಜಾತಾ ಬಾಂದೇಕರ, ನಯನಾ ನೀಲಾವರ, ಕಲ್ಪನಾ ನಾಯ್ಕ, ಮಾಲಾ ಹುಲಸ್ವಾರ, ಅನುಶ್ರೀ ಕುಬಡೆ, ವಂದನಾ ಶಿರೋಡ್ಕರ್, ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-20-1147847937

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.