ನವದೆಹಲಿ: ಹಾಥರಸ್‌ನಲ್ಲಿ ದಲಿತ ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ವಿರೋಧಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಒತ್ತಾಯಿಸಿ ವಿವಿಧ ಮಹಿಳಾ ಸಂಘಟನೆಗಳು ಅ.29ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿವೆ.

ಅಖಿಲ ಭಾರತೀಯ ಪ್ರಜಾಸತ್ಮಾತ್ಮಕ ಮಹಿಳಾ ಸಂಘಟನೆ, ಭಾರತೀಯ ಮಹಿಳೆಯರ ರಾಷ್ಟ್ರೀಯ ಒಕ್ಕೂಟ, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆ ಮತ್ತು ಇತರೆ ಸಂಘ ಸಂಸ್ಥೆಗಳು, ಹೋರಾಟಗಾರರು ಜಂಟಿಯಾಗಿ ಈ ಪ್ರತಿಭಟನೆ ನಡೆಸುತ್ತಿರುವುದಾಗಿ ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.

ಹಾಥರಸ್ ಪ್ರಕರಣದ ತನಿಖೆ ನ್ಯಾಯಯುತವಾಗಿ ನಡೆಯಬೇಕು, ಜೀವನ, ಜೀನವೋಪಾಯ, ಪ್ರಜಾಪ್ರಭುತ್ವ ಹಕ್ಕುಗಳನ್ನು ರಕ್ಷಿಸಬೇಕು ಮತ್ತು ಹಿಂಸಾಚಾರ ಮುಕ್ತ ಜೀವನಕ್ಕೆ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿ ಮಹಿಳಾ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ, ಮೇಲ್ಜಾತಿಗೆ ಸೇರಿದ ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ. ಠಾಕೂರ್ ಸಮುದಾಯದವರಿಗೆ ಜಾತಿ ಪಂಚಾಯ್ತಿಗಳನ್ನು ನಡೆಸಲು ಅವಕಾಶ ನೀಡಿ, ಸಂತ್ರಸ್ತೆಯ ಕುಟುಂಬಕ್ಕೆ ಬಹಿರಂಗವಾಗಿ ಸವಾಲು ಹಾಕಲು ಅವಕಾಶ ನೀಡುತ್ತಿದೆ‘ ಎಂದು ಸಂಘಟನೆಗಳು ಹೇಳಿಕೆಯಲ್ಲಿ ಆರೋಪಿಸಿವೆ.

‘ಅತ್ಯಾಚಾರ ಎಸಗಿರುವ ವಿಚಾರವನ್ನು ತನಿಖಾ ಸಂಸ್ಥೆ ನಿರ್ದಯವಾಗಿ ನಿರಾಕರಿಸುತ್ತಿದೆ. ಕುಟುಂಬವನ್ನು ಬೆಂಬಲಿಸಿದ ಜನರ ವಿರುದ್ಧ ಪ್ರಕರಣಗಳು ದಾಖಲಾಗಿವೆ‘ ಎಂದು ಸಂಘಟನೆಗಳು ದೂರಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.