ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವು ಒಕ್ಕೂಟ ವ್ಯವಸ್ಥೆಗೆ ಅತ್ಯುತ್ತಮ ಉದಾಹರಣೆಯಾಗಿತ್ತು. ಆದರೆ, ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ರಾಜ್ಯವನ್ನು ಛಿದ್ರಗೊಳಿಸಿತು. ಇಲ್ಲಿ ಭದ್ರತೆಯ ಹೆಸರಿನಲ್ಲಿ ಪ್ರತಿದಿನ ಕಿರುಕುಳ ಮತ್ತು ತಪಾಸಣೆ ನಡೆಯುತ್ತಿದೆ. ಜಮ್ಮು ಮತ್ತು ಕಾಶ್ಮೀರ ವಿಶ್ವದಲ್ಲೇ ಅತ್ಯಂತ ಮಿಲಿಟರೀಕೃತ ರಾಜ್ಯವಾಗಿ ಮಾರ್ಪಟ್ಟಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಪಿಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಸ್ಪರ್ಧಿಸುತ್ತದೆ. ಆದರೆ, ನಾನು ಸ್ಪರ್ಧಿಸುವುದಿಲ್ಲ’ ಎಂದು ತಿಳಿಸಿದರು.