ಕೋಲ್ಕತ್ತ: ‘ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ‘ನೈಜ ಜನಾದೇಶವಲ್ಲ, ದೊಡ್ಡ ಪಿತೂರಿ’ ಎಂದು ಆರೋಪಿಸಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆಯನ್ನು ತಳ್ಳಿಹಾಕಿದರು.

‘ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಏಕೆಂದರೆ, ನಾವು ಜನಾದೇಶದಿಂದ ಸೋತಿಲ್ಲ. ಒಳಸಂಚಿನಿಂದಾಗಿ ಸೋತಿದ್ದೇವೆ. ಆದ್ದರಿಂದ ರಾಜೀನಾಮೆ ನೀಡಲು ಲೋಕಭವನಕ್ಕೆ ಹೋಗುವುದಿಲ್ಲ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ನಾನು ಏಕೆ ರಾಜೀನಾಮೆ ನೀಡಬೇಕು? ನಾವು ಸೋತಿಲ್ಲ. ಮತಗಳನ್ನು ಲೂಟಿ ಮಾಡಲಾಗಿದೆ. ರಾಜೀನಾಮೆಯ ಪ್ರಶ್ನೆ ಎಲ್ಲಿಂದ ಉದ್ಭವಿಸುತ್ತದೆ? ಎಂದು ಪ್ರತಿಪಾದಿಸಿದರು.

ಆದರೂ ಸಾಂವಿಧಾನಿಕ ಆಯ್ಕೆಗಳು ಮುಕ್ತವಾಗಿವೆ ಎಂದು ಮಮತಾ ಸೂಚಿಸಿದರು. ‘ಅವರು ಸಾಂವಿಧಾನಿಕ ನಿಯಮಗಳ ಅನುಸಾರ ಮುಂದಿನ ಕ್ರಮ ತೆಗೆದುಕೊಳ್ಳಬಹುದು’ ಎಂದರು. ಆದರೆ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲಿಲ್ಲ.

‘ಮತ ಎಣಿಕೆಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ. ಸುಮಾರು 100 ಸ್ಥಾನಗಳನ್ನು ‘ಲೂಟಿ ಮಾಡಲಾಗಿದೆ’ ಎಂಬ ಆರೋಪವನ್ನು ಅವರು ಪುನರುಚ್ಚರಿಸಿದರು.

‘ಈ ಚುನಾವಣೆಯಲ್ಲಿ ನಾವು ಬಿಜೆಪಿ ವಿರುದ್ಧ ಹೋರಾಡಿಲ್ಲ. ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದ ಚುನಾವಣಾ ಆಯೋಗದ ವಿರುದ್ಧ ಹೋರಾಡಿದ್ದೇವೆ. ನನ್ನ ಇಡೀ ರಾಜಕೀಯ ಜೀವನದಲ್ಲಿ ಇಂತಹ ಚುನಾವಣೆಯನ್ನು ಎಂದಿಗೂ ನೋಡಿಲ್ಲ’ ಎಂದರು.

ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ್ದರಿಂದ ತಮ್ಮ ಕಾರ್ಯತಂತ್ರದಲ್ಲಿ ಬದಲಾವಣೆಯಾಗಿರುವುದರ ಸೂಚನೆ ನೀಡಿದ ಮಮತಾ, ರಾಷ್ಟ್ರಮಟ್ಟದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟವನ್ನು ಬಲಪಡಿಸುವತ್ತ ಗಮನಹರಿಸುವುದಾಗಿ ತಿಳಿಸಿದರು.

‘ಇಂಡಿಯಾ ಮೈತ್ರಿಕೂಟದ ನಾಯಕರು ಒಗ್ಗಟ್ಟು ವ್ಯಕ್ತಪಡಿಸಲು ನನಗೆ ಕರೆ ಮಾಡಿದ್ದಾರೆ. ಸೋನಿಯಾ ಮತ್ತು ರಾಹುಲ್ ಗಾಂಧಿ ನನ್ನೊಂದಿಗೆ ಮಾತನಾಡಿದ್ದಾರೆ. ಅರವಿಂದ ಕೇಜ್ರಿವಾಲ್, ಉದ್ಧವ್ ಠಾಕ್ರೆ, ಅಖಿಲೇಶ್ ಯಾದವ್ ಮತ್ತು ಹೇಮಂತ್ ಸೊರೇನ್ ಅವರಂತಹ ನಾಯಕರಿಂದಲೂ ನನಗೆ ಕರೆಗಳು ಬಂದಿವೆ’ ಎಂದರು.

‘ಮುಖ್ಯಮಂತ್ರಿ ಹುದ್ದೆಯಲ್ಲಿ ಇರುವವರೆಗೂ, ನಾನು ಅನೇಕ ವಿಷಯಗಳನ್ನು ಸಹಿಸಿಕೊಂಡಿದ್ದೆ. ಈಗ ಸ್ವತಂತ್ರಗೊಂಡ ಹಕ್ಕಿಯಂತಾಗಿದ್ದೇನೆ. ನಾನೊಬ್ಬಳು ಬೀದಿ ಹೋರಾಟಗಾರ್ತಿ. ಬೀದಿಗಳಲ್ಲಿದ್ದುಕೊಂಡೇ ಎಲ್ಲಾ ಅನ್ಯಾಯಗಳ ವಿರುದ್ಧ ಹೋರಾಡುತ್ತೇನೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.